ಮುಳ್ಳೇರಿಯ: ಬೆಳ್ಳೂರು ಸರಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ಎಲ್ಲಾ 87 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶಾಲೆ ಶೇ.100 ಫಲಿತಾಂಶ ಪಡೆಯಲು ಕಾರಣರಾದ ವಿದ್ಯಾರ್ಥಿಗಳನ್ನು ಇತ್ತೀಚೆಗೆ ಅಭಿನಂದಿಸಲಾಯಿತು.
ಪ್ರಾಂಶುಪಾಲ ಶ್ರೀಕೃಷ್ಣ ಭಟ್ ಕಾರ್ಯಕ್ರಮ ಉದ್ಘಾಟಿಸಿದರು. ಶಿಕ್ಷಕರಾದ ರಾಘವ, ಮೋಹನನ್ ಹಾಗೂ ಸ್ಮಿತಾ ಭಾಸ್ಕರನ್ ಶುಭ ಹಾರೈಸಿದರು. ಆದೂರು ಪೆÇಲೀಸ್ ಠಾಣೆಯ ಸಹಾಯಕ ಠಾಣಾಧಿಕಾರಿ ಮೋಹನನ್, ಶಾಲಾ ವ್ಯವಸ್ಥಾಪಕ ಸಮಿತಿ ಅಧ್ಯಕ್ಷ ಶಶಿಧರ ಗೋಳಿಕಟ್ಟೆ ಅವರು ಎಲ್ಲಾ ವಿಷಯಗಳಲ್ಲಿ ಎ ಪ್ಲಸ್ ಗಳಿಸಿದ ವಿದ್ಯಾರ್ಥಿನಿಯರಾದ ಅನುಷಾ ಮತ್ತು ಫಾತಿಮತ್ ಸಹಲಾ ಅವರಿಗೆ ಫಲಕ ನೀಡಿ ಗೌರವಿಸಿದರು.
ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಎನ್.ಎಚ್.ಮೊಹಮ್ಮದ್, ಉಪಾಧ್ಯಕ್ಷ ಎನ್.ಎಚ್.ಇಬ್ರಾಹಿಂ, ಮಾತೃ ಮಂಡಳಿ ಅಧ್ಯಕ್ಷೆ ಶಾಂತಾ, ಉಪಾಧ್ಯಕ್ಷೆ ಝುಲೈಕಾ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ವಾರಿಜಾ ನೇರೋಳು ಸ್ವಾಗತಿಸಿ, ಹಿರಿಯ ಶಿಕ್ಷಕ ಕುಂಞÂರಾಮ ಮಣಿಯಾಣಿ ವಂದಿಸಿದರು. ಶಿಕ್ಷಕ ದಾಸಪ್ಪ ಕಾರ್ಯಕ್ರಮ ನಿರೂಪಿಸಿದರು.