ಮಂಜೇಶ್ವರ: ಕುಳೂರಿನಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಾದಕ ವಸ್ತು ವಿರೋಧಿ ದಿನಾಚರಣೆಯನ್ನು ಬುಧವಾರ ಆಚರಿಸಲಾಯಿತು.
ಕಾರ್ಯಕ್ರಮದ ಅಂಗವಾಗಿ ವಿಶೇಷ ಅಸೆಂಬ್ಲಿ ನಡೆಸಲಾಯಿತು. ಶಾಲಾ ಶಿಕ್ಷಕಿ ಸೌಮ್ಯ ಪಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಮಾಹಿತಿ ನೀಡಿದರು. ಬಳಿಕ ಶಾಲಾ ಶಿಕ್ಷಕಿ ನಯನ ಯಂ ರವರು ಶಾಲಾ ಮಕ್ಕಳಲ್ಲಿ ಮಾದಕ ವಸ್ತುಗಳ ವಿರುದ್ಧ ಪ್ರತಿಜ್ಞೆ ಬೋಧಿಸಿದರು. ಶಾಲಾ ಮುಖ್ಯೋಪಾಧ್ಯಾಯ ಸತ್ಯನಾರಾಯಣ ಶರ್ಮಾ ಪಿ, ಅಧ್ಯಾಪಕ ಜಯಪ್ರಶಾಂತ್ ಪಾಲೆಂಗ್ರಿ, ಅಶ್ವಿನಿ ಎಲಿಯಾಣ, ರಮೀಝ ಉಪಸ್ಥಿತರಿದ್ದರು.