ಗುರುವಾಯೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಶನಿವಾರ ಬೆಳಿಗ್ಗೆ ಕೇರಳದ ಗುರುವಾಯೂರು ಶ್ರೀಕೃಷ್ಣ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಕೊಚ್ಚಿ ವಿಮಾನ ನಿಲ್ದಾಣಕ್ಕೆ ಶುಕ್ರವಾರ ರಾತ್ರಿ ಆಗಮಿಸಿದ ಪ್ರಧಾನಿ ಮೋದಿಯನ್ನು ಔಪಚಾರಿಕವಾಗಿ ಕೇರಳ ರಾಜ್ಯಪಾಲ ಪಿ ಸತಾಸಿವಂ, ಕೇಂದ್ರದ ನಾಯಕರು ಮತ್ತು ಕೇರಳ ಸರ್ಕಾರದ ವತಿಯಿಂದ ಸ್ವಾಗತಿಸಲಾಯಿತು. ಅಲ್ಲಿಂದ ನೌಕಾಪಡೆಯ ವಿಶೇಷ ಹೆಲಿಕಾಪ್ಟರ್ ನಲ್ಲಿ ಶ್ರೀಕೃಷ್ಣ ಕಾಲೇಜಿನ ಮೈದಾನದಲ್ಲಿ 9.50ರ ವೇಳೆಗೆ ಬಂದಿಳಿದರು.ಅಲ್ಲಿಂದ ನೇರವಾಗಿ ಗುರುವಾಯೂರು ದೇವಸ್ಥಾನಕ್ಕೆ ತೆರಳಿದರು. ಈ ಸಂದರ್ಭದಲ್ಲಿ ತೀವ್ರ ಭದ್ರತೆ ಒದಗಿಸಲಾಗಿತ್ತು.
ಬಳಿಕ ದೇವಾಲಯದಲ್ಲಿ ಕಮಲದ ಹೂವಿನ ತುಲಾಭಾರ ಸೇವೆಯಲ್ಲಿ ಪ್ರಧಾನಿ ಮೋದಿ ಭಾಗಿಯಾದರು.
ಗುರುವಾಯೂರು ದೇವಸ್ಥಾನದಲ್ಲಿ ಸುಮಾರು ಒಂದು ಗಂಟೆ ಕಾಲ ದೇವರ ದರ್ಶನ ಮಾಡಿ ಪೂಜೆ ಸಲ್ಲಿಸಿದ ಪ್ರಧಾನಿ ನಂತರ ಕೇರಳ ರಾಜ್ಯ ಬಿಜೆಪಿ ಸಮಿತಿ ಏರ್ಪಡಿಸಿರುವ ಅಭಿನಂದನಾ ಸಭೆಯಲ್ಲಿ ಭಾಗವಹಿಸಿದರು.
#WATCH Kerala: Prime Minister Narendra Modi offers prayers at Sri Krishna Temple in Guruvayur of Thrissur.