ಮಂಜೇಶ್ವರ: ಕುಂಜತ್ತೂರಿನ ಶ್ರೀ ಮಹಾಲಿಂಗೇಶ್ವರ ವಿದ್ಯಾನಿಕೇತನ ಶಾಲೆಯಲ್ಲಿ 2019-20 ನೇ ಶೈಕ್ಷಣಿಕ ವರ್ಷದ ಪ್ರವೇಶೋತ್ಸವ ಶ್ರೀ ಮಹಾಲಿಂಗೇಶ್ವರ ಕ್ಷೇತ್ರದ ಸಭಾಂಗಣದಲ್ಲಿ ಗುರುವಾರ ಜರಗಿತು.
ಕಾರ್ಯಕ್ರಮವನ್ನು ಮಂಗಳೂರಿನ ಖ್ಯಾತ ಲೆಕ್ಕಪರಿಶೋಧಕ ನರೇಂದ್ರ ಪೈ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ವೇದಿಕೆಯಲ್ಲಿ ನರ್ಮದಾ ಪೈ, ಖ್ಯಾತ ಪರಿಸರವಾದಿ ಮಾಧವ್ ಉಳ್ಳಾಲ್, ಶಾಲಾ ನೂತನ ಪ್ರಾಂಶುಪಾಲೆ ಬಬಿತಾ ಸೂರಜ್, ಶಾಲಾ ಸಂಯೋಜಕ ದಾಮೋದರ ಶೆಟ್ಟಿ ಉಪಸ್ಥಿತರಿದ್ದರು. ಮುಖ್ಯ ಅತಿಥಿಗಳನ್ನು ದಾಮೋದರ ಶೆಟ್ಟಿ ಸ್ವಾಗತಿಸಿ, ಶಿಕ್ಷಕಿ ಮೋಹಿನಿ ರಾಮಕೃಷ್ಣ ವಂದಿಸಿದರು. ಶಿಕ್ಷಕಿ ಆಶಾ ರವಿ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಮಹಾಲಿಂಗೇಶ್ವರ ದೇವಸ್ಥಾನದಿಂದ ಶಾಲಾ ವಠಾರಕ್ಕೆ ವಿದ್ಯಾರ್ಥಿಗಳನ್ನು ಕರೆ ತರಲಾಯಿತು. ನೂರಾರು ಮಂದಿ ಪೆÇೀಷಕರು ಉಪಸ್ಥಿತರಿದ್ದರು.