ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಯೋಧರನ್ನು ಗುರಿಯಾಗಿಸಿಕೊಂಡು ಉಗ್ರರು ದಾಳಿ ನಡೆಸಿದ್ದು ಈ ದಾಳಿಯಲ್ಲಿ ಐವರು ಯೋಧರು ಹುತಾತ್ಮರಾಗಿದ್ದಾರೆ.
ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಭಾರತೀಯ ಯೋಧರು ಗಸ್ತು ತಿರುಗುತ್ತಿದ್ದಾಗ ಇಬ್ಬರು ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಐವರು ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ.
ಇಬ್ಬರು ಉಗ್ರ ಪೈಕಿ ಓರ್ವನನ್ನು ಭಾರತೀಯ ಸೇನೆ ಹೊಡೆದುರುಳಿಸಿದ್ದಾಗಿ ತಿಳಿದುಬಂದಿದೆ. ಇನ್ನು ಮತ್ತೋರ್ವ ಉಗ್ರ ಅಡಗಿ ಕುಳಿತ್ತಿದ್ದು ಕಾರ್ಯಾಚರಣೆ ಮುಂದುವರೆದಿದೆ.