ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆ ಚುನಾವಣೆ ಇನ್ನು ವಿಳಂಬವಾಗಲಿದ್ದು ಐತಿಹಾಸಿಕ ಅಮರನಾಥ ಯಾತ್ರೆ ಬಳಿಕ ವಷಾರ್ಂತ್ಯಕ್ಕೆ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಹೇಳಿದೆ.
ಆಗಸ್ಟ್ 15ರಂದು ಅಮರನಾಥ ಯಾತ್ರೆ ಕೊನೆಗೊಳ್ಳಲಿದೆ. ನಂತರ ಚುನಾವಣಾ ದಿನಾಂಕವನ್ನು ಘೋಷಿಸಲಾಗುವುದು ಎಂದು ಚುನಾವಣಾ ಆಯೋಗ ಹೇಳಿದೆ.
ಬಿಜೆಪಿ ಜೊತೆಗಿನ ಮೈತ್ರಿಯನ್ನು ಪಿಡಿಪಿಯ ಮೆಹಬೂಬಾ ಮುಫ್ತಿಯವರು ಕಡಿದುಕೊಂಡ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ರಾಜ್ಯ ರಾಷ್ಟ್ರಪತಿ ಆಡಳಿತ ಹೇರಲಾಗಿತ್ತು.