ಕಾಸರಗೋಡು: ಡಿಜಿಟಲ್ ಇಂಡಿಯಾ ವಾರ್ಷಿಕೋತ್ಸವದ ಅಂಗವಾಗಿ ಜಿಲ್ಲಾ ಮಟ್ಟದ ತರಬೇತಿ ಕಾರ್ಯಕ್ರಮ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಕಿರು ಸಭಾಂಗಣದಲ್ಲಿ ನಡೆಯಿತು.
ಸಹಾಯಕ ಜಿಲ್ಲಾಧಿಕಾರಿ ಪಿ.ಆರ್.ರಾಧಿಕಾ ಉದ್ಘಾಟಿಸಿದರು. ಆಧಾರ್ ಕೇಂದ್ರಿತ ಬಯೋಮೆಟ್ರಿಕ್ ಅಟೆಂಡೆನ್ಸ್ ಎಂಬ ವಿಷಯದಲ್ಲಿ ಜಿಲ್ಲಾ ಇನ್ ಫಾರ್ಮೆಟಿಕ್ಸ್ ಅಧಿಕಾರಿ ಕೆ.ರಾಜನ್ ತರಗತಿನಡೆಸಿದರು. ಹುಸೂರ್ ಶಿರಸ್ತೇದಾರ್ ಕೆ.ನಾರಾಯಣನ್ , ಜಿಲ್ಲಾ ವಾರ್ತಾ ಅಧಿಕಾರಿ ಮಧುಸೂದನನ್ ಎಂ., ಜಿಲ್ಲಾ ಕಾನೂನು ಅಧಿಕಾರಿ ಕೆ.ಪಿ.ಉಣ್ಣಿಕೃಷ್ಣನ್ ಉಪಸ್ಥಿತರಿದ್ದರು.