ಸಮರಸ ಚಿತ್ರ ಸುದ್ದಿ: ಮಂಜೇಶ್ವರ: ಕುಳೂರಿನಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿನವನ್ನು ಆಚರಿಸಲಾಯಿತು.
ಕಾರ್ಯಕ್ರಮದ ಅಂಗವಾಗಿ ಕಾರ್ಗಿಲ್ ಯುದ್ಧದಲ್ಲಿ ಮಡಿದ ವೀರ ಯೋಧರಿಗೆ ಗೌರವ ನಮನವನ್ನು ಸಲ್ಲಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯ ಸತ್ಯನಾರಾಯಣ ಶರ್ಮಾ ಪಿ ಅವರು ಮಕ್ಕಳಿಗೆ ಕಾರ್ಗಿಲ್ ಯುದ್ಧದ ಮಾಹಿತಿಯನ್ನು ನೀಡಿದರು. ಬಳಿಕ ವೀಡಿಯೋ ಪ್ರದರ್ಶನ ಏರ್ಪಡಿಸಲಾಯಿತು. ಶಾಲಾ ಶಿಕ್ಷಕ ವೃಂದ ಉಪಸ್ಥಿತರಿದ್ದು ಸಹಕರಿಸಿದರು.