ಕುಂಬಳೆ: ಶನಿವಾರ ರಾತ್ರಿ ಅಗಲಿದ ಹಿರಿಯ ವಿದ್ವಾಂಸ, ಕರ್ನಾಟಕ ಜಾನಪದ ಪರಿಷತ್ತು ಕೇಂದ್ರ ಘಟಕದ ಕಾರ್ಯಕಾರಿ ಸಮಿತಿ ಸದಸ್ಯ, ನಾಡೋಜ ಡಾ.ಕೆ.ಎಲ್.ನಾಗೇಗೌಡರ ಒಡನಾಡಿ ಏರ್ಯ ಲಕ್ಷ್ಮೀನಾರಾಯಣ ಆಳ್ವ ಅವರ ಅಗಲುವಿಕೆಯ ಹಿನ್ನೆಲೆಯಲ್ಲಿ ಕರ್ನಾಟಕ ಜಾನಪದ ಪರಿಷತ್ತು ಕೇರಳ ಗಡಿನಾಡ ಘಟಕದ ನೇತೃತ್ವದಲ್ಲಿ ನುಡಿನಮನ ಕಾರ್ಯಕ್ರಮ ಇಂದು(ಸೋಮವಾರ) ನಡೆಯಲಿದೆ.
ಕುಂಬಳೆಯ ಮಾಧವ ಪೈ ಸಭಾ ಭವನದಲ್ಲಿ ಬೆಳಿಗ್ಗೆ 9.30 ಕ್ಕೆ ನಡೆಯುವ ನುಡಿನಮನ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯ ಅಭಿಮಾನಿಗಳು ಭಾಗವಹಿಸಬೇಕೆಂದು ಜಾನಪದ ಪರಿಷತ್ತು ಕೇರಳ ಗಡಿನಾಡ ಘಟಕ ಪ್ರಕಟಣೆಯಲ್ಲಿ ತಿಳಿಸಿದೆ.