ಉಪ್ಪಳ: ಬಾಯಾರು ಮುಳಿಗದ್ದೆಯಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ 36 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೆ.2 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ 6.45ಕ್ಕೆ ಮೂರ್ತಿ ಪ್ರತಿಷ್ಠೆ, 8 ಗಂಟೆಗೆ ಗಣಹೋಮ ನಡೆಯಲಿದೆ. ಬಳಿಕ ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿ ಹಾಗೂ ಮಹಿಳಾ ಮಂಡಳಿ ಬಾಯಾರು ಇದರ ಸದಸ್ಯರಿಂದ ಬೆಳಿಗ್ಗೆ 9 ರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 12.30ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ.
ಸಂಜೆ 5 ಕ್ಕೆ ನಡೆಯುವ ಸಭೆಯಲ್ಲಿ ಡಾ.ವಿಷ್ಣು ಭಟ್ ಪಾದೆಕಲ್ಲು ಅವರು ಧಾರ್ಮಿಕ ಭಾಷಣ ಮಾಡುವರು. ರಾತ್ರಿ 7.30 ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, ಗಣೇಶ ವಿಗ್ರಹದ ಶೋಭಾಯಾತ್ರೆ ಹಾಗೂ ವಿಸರ್ಜನೆ ನಡೆಯಲಿದೆ.