ಮುಳ್ಳೇರಿಯ: ಕುಂಟಾರು ಸಾರ್ವಜನಿಕ ಗಣÉೀಶೋತ್ಸವ ಸಮಿತಿ ಇದರ ಆಶ್ರಯದಲ್ಲಿ ಸೆ.1ರಿಂದ 3ರ ತನಕ ನಡೆಯಲಿರುವ 38ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಭಾನುವಾರ ಕುಂಟಾರು ಶ್ರೀರಾಮ ನಗರದ ಶ್ರೀ ಅಯ್ಯಪ್ಪ ಭಜನಾ ಮಂದಿರದಲ್ಲಿ ನಡೆಯಿತು.
ಗಣೇಶೋತ್ಸವ ಸಮಿತಿಯ ರಕ್ಷಾಧಿಕಾರಿ ಬ್ರಹ್ಮಶ್ರೀ ವಾಸುದೇವ ತಂತ್ರಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು. ಗಣೇಶೋತ್ಸವ ಸಮಿತಿ ಅಧ್ಯಕ್ಷ ಪ್ರಕಾಶ.ಯಂ ಸಭೆಯ ಅಧ್ಯಕ್ಷತೆ ವಹಿಸಿದರು. ಸಮಾರಂಭದಲ್ಲಿ ಶ್ರೀ ಅಯ್ಯಪ್ಪ ಭಜನಾ ಮಂದಿರದ ಗುರುಸ್ವಾಮಿ ಯಾದವ ರಾವ್, ಶ್ರೀಕೃಷ್ಣ ಲೀಲೋತ್ಸವ ಸಮಿತಿ ಅಧ್ಯಕ್ಷ ಜಯರಾಮ ಭಟ್, ಭಜನಾ ಮಂದಿರ ಸಮಿತಿ ಅಧ್ಯಕ್ಷ ಸುಧೀಶ್, ಕುಂಟಾರು ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ವ್ಯವಸ್ಥಾಪಕ ಜಗದೀಶ್ ಮಾಸ್ತರ್ ಉಪಸ್ಥಿತರಿದ್ದರು. ಆ.23ರಂದು ಕುಂಟಾರು ಶ್ರೀ ಮಹಾ ವಿಷ್ಣುಮೂರ್ತಿ ಕ್ಷೇತ್ರದಲ್ಲಿ ನಡೆಯಲಿರುವ ಶ್ರೀಕೃಷ್ಣ ಲೀಲೋತ್ಸವ ಕಾರ್ಯಕ್ರಮ ಮತ್ತು ಕುಂಟಾರು ಯಕ್ಷ ಮಿತ್ರರು ಇವರ ವತಿಯಿಂದ ಸೆ.2ರಂದು ನಡೆಯಲಿರುವ ಯಕ್ಷಗಾನ ಬಯಲಾಟದ ಸಹಾಯಾರ್ಥ ತಯಾರಿಸಿದ ಲಕ್ಕಿ ಕೂಪನ್‍ನ್ನು ಇದೇ ಸಂದರ್ಭದಲ್ಲಿ ಬ್ರಹ್ಮಶ್ರೀ ವಾಸುದೇವ ತಂತ್ರಿ ಬಿಡುಗಡೆಗೊಳಿಸಿದರು. ವಿವಿಧ ಉಪ ಸಮಿತಿಗಳನ್ನು ರಚಿಸಲಾಯಿತು.
ಗಣೇಶೋತ್ಸವ ಸಮಿತಿ ಜೊತೆ ಕಾರ್ಯದರ್ಶಿ ಲತೀಶ ಸ್ವಾಗತಿಸಿ, ಕಾರ್ಯದರ್ಶಿ ರಾಜೇಶ್.ಎಚ್ ವಂದಿಸಿದರು.