ಮಂಜೇಶ್ವರ: ಸಂತಡ್ಕ ಶ್ರೀ ಅರಸು ಸಂಕಲ ದೈವ ಕ್ಷೇತ್ರ ಪರಿಸರದಲ್ಲಿ ಸೆ.2 ರಂದು ವಿವಿಧ ಕಾರ್ಯಕ್ರಮಗಳೊಂದಿಗೆ 15 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಜರಗಲಿದೆ.
ಬೆಳಿಗ್ಗೆ 8 ಕ್ಕೆ ಗಣಪತಿ ಪ್ರತಿಷ್ಠೆ, 8.30 ಕ್ಕೆ ಭಜನೆ, 9 ಕ್ಕೆ ಗಣಹೋಮ, ತಂಬಿಲ, 11.30 ಕ್ಕೆ ಧಾರ್ಮಿಕ ಸಭೆ ನಡೆಯಲಿದೆ. ಸಭೆಯಲ್ಲಿ ಡಾ.ಶ್ರೀಧರ ಭಟ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಯಾಗಿ ನ್ಯಾಯವಾದಿ ನವೀನ್‍ರಾಜ್ ಕೆ.ಜೆ.ಹೊಸಂಗಡಿ ಭಾಗವಹಿಸಲಿದ್ದಾರೆ.
ಮಧ್ಯಾಹ್ನ 12.30 ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, 1 ರಿಂದ ಅನ್ನಸಂತರ್ಪಣೆ, 2.30 ರಿಂದ ಶ್ರೀ ಗಣೇಶ ವಿಗ್ರಹ ವಿಸರ್ಜನಾ ಮೆರವಣಿಗೆ ನಡೆಯುವುದು.