ಮುಂಬೈ: ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಸಾರ್ವಜನಿಕ ಕಾರ್ಯಕ್ರಮದ ವೇದಿಕೆಯಲ್ಲೇ ಕುಸಿದ ಘಟನೆ ಗುರುವಾರ ಸೋಲಾಪುರದಲ್ಲಿ ನಡೆದಿದೆ.
ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯಲ್ಲಿ ಒಂದು ದಿನದ ಪ್ರವಾಸ ಕೈಗೊಂಡಿರುವ ನಿತಿನ್ ಗಡ್ಕರಿ ಅವರು, ಪುಣ್ಯಶ್ಲೋಕ್ ಅಹಿಲ್ಯಾದೇವಿ ಹೋಲ್ಕಾರ್ ಸೋಲಾಪುರ್ ವಿಶ್ವವಿದ್ಯಾಲಯದಲ್ಲಿ ನಡೆದ ಸಂಸ್ಥಾಪನಾ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ರಾಷ್ಟ್ರಗೀತೆ ಹಾಡುತ್ತಿದ್ದ ವೇಳೆ ಗಡ್ಕರಿ ಅವರು ತಲೆಸುತ್ತು ಬಂದು ಕುರ್ಚಿಮೇಲೆ ಕುಸಿದರು.
ಕೂಡಲೇ ಸ್ಥಳಕ್ಕೆ ಆಗಮಿಸಿದ ವೈದ್ಯರು ಗಡ್ಕರಿ ಅವರನ್ನು ಪರಿಶೀಲಿಸಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿಸಿದ್ದಾರೆ.
ಗಡ್ಕರಿ ಅವರು ನಗರದಲ್ಲಿ ಇನ್ನೂ ಎರಡು ಕಾರ್ಯಕ್ರಮಗಳಲ್ಲಿ ಭಾವಹಿಸಬೇಕಾಗಿತ್ತು. ಆದರೆ ಅನಾರೋಗ್ಯದ ಹಿನ್ನೆಲೆಯಲ್ಲಿ ಅವರು ತಮ್ಮ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ. ಗಡ್ಕರಿ ಅವರು ಈಗ ನಾಗಪುರಕ್ಕೆ ಮರಳುತ್ತಿದ್ದಾರೆ ಎಂದು ಮಹಾರಾಷ್ಟ್ರ ಸಹಕಾರ ಸಚಿವ ಸುಭಾಶ್ ದೇಶಮುಖ್ ಅವರು ಮಾಧ್ಯಮಕ್ಕೆ ಗೆ ತಿಳಿಸಿದ್ದಾರೆ.