ನವದೆಹಲಿ: ಬಿಜೆಪಿಯ ಹಿರಿಯ ನಾಯಕಿ ಮತ್ತು ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನಿಧನರಾಗಿದ್ದಾರೆ.ಹೃದಯಾಘಾತದಿಂದ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಸುಷ್ಮಾ ಸ್ವರಾಜ್(67 ) ಮಂಗಳವಾರ ರಾತ್ರಿ ನಿಧನರಾದರು.
ತಾವು ನಿಧನರಾಗುವ ಮೊದಲು 370ನೇ ವಿಧಿಯನ್ನು ಹಿಂತೆಗೆದುಕೊಳ್ಳುವ ಕ್ರಮಕ್ಕೆ ಪ್ರಧಾನಿ ಮೋದಿಯವರನ್ನು ಅಭಿನಂದಿಸಿ ಸುಷ್ಮಾ ಸ್ವರಾಜ್ ಅವರು ನಿನ್ನೆ ಟ್ವೀಟ್ ಮಾಡಿದ್ದರು.
ಬಹುಕಾಲದಿಂದ ಬಿಜೆಪಿಯ ಪ್ರಮುಖ ಮಹಿಳಾ ಮುಖಂಡೆಯಾಗಿದ್ದ ರಾಜ್, ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ.
ಕಳೆದ ವರ್ಷ ನವೆಂಬರ್‍ನಲ್ಲಿ ಅವರು ತಮಗೆ ಅನಾರೋಗ್ಯವಾಗಿರುವ ಕಾರಣ 2019 ರ ಸಾರ್ವತ್ರಿಕ ಚುನಾವಣೆಯಲ್ಲಿಸ್ಪರ್ಧಿಸುವುದಿಲ್ಲ ಎಂದು ಅವರು ಘೋಷಿಸಿದ್ದರು.