ಕಾಸರಗೋಡು: ಬಿಜೆಪಿ ಕಾಸರಗೋಡು ಮಂಡಲ ಸಮಿತಿ ನೇತೃತ್ವದಲ್ಲಿ ಅಯ್ಯಂಗಾಳಿ ದಿನಾಚರಣೆ ಬುಧವಾರ ನಡೆಯಿತು.
ಬಿಜೆಪಿ ಜಿಲ್ಲಾ ಅಧ್ಯಕ್ಷ ನ್ಯಾಯವಾದಿ ಕೆ.ಶ್ರೀಕಾಂತ್ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮಂಡಲ ಬಿಜೆಪಿ ಅಧ್ಯಕ್ಷ ಸುಧಾಮ ಗೋಸಾಡ ಅಧ್ಯಕ್ಷತೆ ವಹಿಸಿದರು.
ಕಾರ್ಯಕ್ರಮದಲ್ಲಿ ನೇತಾರರಾದ ಪಿ.ಸುರೇಶ್ ಕುಮಾರ್ ಶೆಟ್ಟಿ, ರವೀಶ ತಂತ್ರಿ ಕುಂಟಾರು, ನ್ಯಾಯವಾದಿ ಕೆ.ಸದಾನಂದ ರೈ, ಜನನಿ, ಶಿವಕೃಷ್ಣ ಭಟ್, ಮಾಲತಿ ಸುರೇಶ್, ಎ.ಕೆ.ಕಯ್ಯಾರ್, ಸಂಪತ್, ಹರೀಶ್ ನಾರಂಪಾಡಿ, ಸವಿತಾ ಟೀಚರ್ ಮೊದಲಾದವರು ಉಪಸ್ಥಿತರಿದ್ದರು. ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಸುಕುಮಾರ ಕುದ್ರೆಪ್ಪಾಡಿ ಸ್ವಾಗತಿಸಿ, ವಂದಿಸಿದರು.