ಕಾಸರಗೋಡು: ಕರ್ನಾಟಕ ಜಾನಪದ ಪರಿಷತ್ತು ಕೇರಳ ಗಡಿನಾಡ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಜಾನಪದ ಕಲಾವಿದರಿಗೆ ಕೊಡಮಾಡಲಾಗುವ ಉಚಿತ ಕಿಟ್ ಗಳ ವಿತರಣೆ ಇಂದು(ಶನಿವಾರ) ಬೆಳಿಗ್ಗೆ 9 ರಿಂದ ನಗರದ ಹೋಟೆಲ್ ಕ್ಯಾಪಿಟಲ್ ಇನ್ ಸಭಾಂಗಣದಲ್ಲಿ ನಡೆಯಲಿದೆ.
ಕರ್ನಾಟಕ ಜಾನಪದ ಪರಿಷತ್ತು ಕೇಂದ್ರ ಘಟಕದ ಅಧ್ಯಕ್ಷ ಟಿ.ತಿಮ್ಮೇಗೌಡ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಮಾರಂಭವನ್ನು ಕರ್ನಾಟಕ ಸರ್ಕಾರದ ನಿವೃತ್ತ ಪೋಲೀಸ್ ಮಹಾನಿರ್ದೇಶಕ ಕೆ.ವಿ.ಆರ್.ಠಾಗೋರ್ ಉದ್ಘಾಟಿಸುವರು. ಕರ್ನಾಟಕ ಸರ್ಕಾರದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಡಾ.ಕಿಕ್ಕೇರಿ ಕೃಷ್ಣಮೂರ್ತಿ ಅವರು ಕಲಾವಿದರ ಉಚಿತ ಕಿಟ್ ಗಳನ್ನು ವಿತರಿಸುವರು. ಶಾಸಕ ಎನ್.ಎ.ನೆಲ್ಲಿಕುನ್ನು, ಜಿ.ಪಂ.ಸದಸ್ಯ ನ್ಯಾಯವಾದಿ ಕೆ.ಶ್ರೀಕಾಂತ್, ಕಸಾಪ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಎಸ್., ಬಹುಭಾಷಾ ಸಾಹಿತಿ ಮೊಹಮ್ಮದ್ ಬಡ್ಡೂರ್, ಜಾನಪದಲೋಕ ಪ್ರಶಸ್ತಿ ವಿಜೇತ ಜಗದೀಶ್ಚಂದ್ರ ಅಂಚನ್ ಸೂಟರ್‍ಪೇಟೆ, ಕಸಾಪ ಉಡುಪಿ ಜಿಲ್ಲಾಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ, ಜಾನಪದ ಪರಿಷತ್ತು ಕೊಡಗು ಜಿಲ್ಲಾಧ್ಯಕ್ಷ ಬಿ.ಜಿ.ಅನಂತಶಯನ, ಕಾಸರಗೋಡು ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಸ್.ಜೆ.ಪ್ರಸಾದ್, ಹಿರಿಯ ಪತ್ರಕರ್ತ ದಯಾಸಾಗರ ಚೌಟ ಮುಂಬೈ, ಗಡಿನಾಡ ಸಾಹಿತ್ಯ-ಸಾಂಸ್ಕøತಿಕ ಅಕಾಡೆಮಿ ಅಧ್ಯಕ್ಷ ಪ್ರಭಾಕರ ಕಲ್ಲೂರಾಯ ಬನದಗದ್ದೆ, ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷ ಅಶ್ವತ್ ಪೂಜಾರಿ ಲಾಲ್‍ಬಾಗ್, ಮುಂಬೈ ತುಳುನಾಡ ಸೇವಾ ಸಮಾಜದ ಅಧ್ಯಕ್ಷ ಡಾ.ರವಿರಾಜ ಸುವರ್ಣ ಮೊದಲಾದವರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು.