ಮುಳ್ಳೇರಿಯ : ಕಾಸರಗೋಡು ಜಿಲ್ಲಾ ಶಿವಳ್ಳಿ ಬ್ರಾಹ್ಮಣ ಸಭಾದ ಅಂಗಸಂಸ್ಥೆಯಾದ ಮುಳ್ಳೇರಿಯ ವಲಯ ಶಿವಳ್ಳಿ ಬ್ರಾಹ್ಮಣ ಸಭಾದ ಮಾಸಿಕ ಸಭೆಯು ಸೆ.10ರಂದು ಅಡೂರಿನ ಕೃಷ್ಣನಿವಾಸದ ಬಾಲಕೃಷ್ಣ ತಂತ್ರಿಗಳ ಮನೆಯಲ್ಲಿ ಬೆಳಗ್ಗೆ 10ರಿಂದ ನಡೆಯಲಿದೆ. ಈ ಸಂದರ್ಭದಲ್ಲಿ ವಿಷ್ಣು ಸಹಸ್ರನಾಮ ಪಾರಾಯಣ, ಅಡೂರಿನ ಶ್ರೀಪ್ರಿಯಾ ಮಹಿಳಾ ಭಜನಾ ಮಂಡಳಿಯ ಸದಸ್ಯರಿಂದ ಭಜನಾ ಕಾರ್ಯಕ್ರಮ ಜರುಗಲಿದೆ. ಮುಳ್ಳೇರಿಯ ವಲಯ ಶಿವಳ್ಳಿ ಬ್ರಾಹ್ಮಣ ಸಭಾದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಸಭೆಯಲ್ಲಿ ಉಪಸ್ಥಿತರಿರಬೇಕೆಂದು ಸಂಘಟನೆಯ ಪ್ರಕಟಣೆ ತಿಳಿಸಿದೆ.