ಬದಿಯಡ್ಕ: ಸೆ. 29 ರಂದು ಭಾನುವಾರ ನೀರ್ಚಾಲು ಮಹಾಜನ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ದಿ. ಖಂಡಿಗೆ ಶಾಮ ಭಟ್ಟರ ಜನ್ಮ ಶತಾಬ್ದಿ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ಅಂಗವಾಗಿ ನೀರ್ಚಾಲು ಮಹಾಜನ ಸಂಸ್ಕøತ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಮಂಗಳೂರು ಕೆ. ಎಂ.ಸಿ ಆಸ್ಪತ್ರೆಯ ತಜ್ಞ ವೈದ್ಯರ ತಂಡದಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ. ಜೊತೆಗೆ ನೀರ್ಚಾಲಿನ ಸೇವಾ ಸಂಘಟನೆ ನಿವೇದಿತಾ ಸೇವಾ ಮಿಷನ್ ಮತ್ತು ಖಂಡಿಗೆ ಶಾಮ ಭಟ್ ಜನ್ಮಶತಾಬ್ದಿ ಸಮಿತಿಯ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಶಿಬಿರಗಳಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಬೇಕಾಗಿ ಸಂಘಟಕರು ವಿನಂತಿಸಿದ್ದಾರೆ. ರಕ್ತದಾನ ಮಾಡುವ ದಾನಿಗಳು ಬೆಳಿಗ್ಗೆ 9 ಕ್ಕೆ ಹೆಸರು ನೊಂದಾಯಿಸಬೇಕಾಗಿ ವಿನಂತಿಸಲಾಗಿದೆ. ಹೆಚ್ಚಿನ ಮಾಹಿತಿಗೆ 9745349447, 6238087537 ಸಂಖ್ಯೆ ಸಂಪರ್ಕಿಸಬಹುದಾಗಿದೆ.