ಕಾಸರಗೋಡು: ನಗರದ ಬಿ.ಇ.ಎಂ. ಪ್ರೌಢ ಶಾಲೆಯಲ್ಲಿ ರಕ್ಷಕ ಶಿಕ್ಷಕ ಸಂಘದ ವತಿಯಿಂದ ದಸರಾ ನಾಡಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಸಾರ್ವಜನಿಕ ಶಿಕ್ಷಣ ಸಂರಕ್ಷಣಾ ಯಜ್ಞದ ಅಧ್ಯಕ್ಷ ವೆಂಕಟರಮಣ ಹೊಳ್ಳ ಅವರು ಉದ್ಘಾಟಿಸಿದರು. ಶಾಲಾ ರಕ್ಷಕ ಶಿಕ್ಷಕ ಸಂಘದ ಸದಸ್ಯರಾದ ಪ್ರೇಮ್‍ಜಿತ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಹಿರಿಯ ಮಾಧ್ಯಮಿಕ ಶಾಲೆಯ ಪ್ರಾಧ್ಯಾಪಿಕೆ ಪುಷ್ಪಲತಾ ಅವರು ದಸರಾ ನಾಡಹಬ್ಬದ ಪ್ರಾಧಾನ್ಯತೆಯ ಕುರಿತು ಮಾತನಾಡಿದರು. ಶಾಲಾ ಮಾತೃ ಸಂಘದ ಅಧ್ಯಕ್ಷೆ ಕವಿತಾ ಟೀಚರ್, ಪಿಟಿಎ ಕಾರ್ಯಕಾರಿ ಸಮಿತಿಯ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಶಾಲಾ ಮುಖ್ಯೋಪಾಧ್ಯಾಯರಾದ ರಾಜೇಶ್ಚಂದ್ರ ಕೆ.ಪಿ. ಅವರು ಅತಿಥಿಗಳನ್ನು ಸ್ವಾಗತಿಸಿದರು. ಶಾಲಾ ಅಧ್ಯಾಪಕ ಬಾಲಕೃಷ್ಣ ಕೆ.ಪಿ. ಕಾರ್ಯಕ್ರಮವನ್ನು ನಿರೂಪಿಸಿದರು. ನೌಕರ ಸಂಘದ ಕಾರ್ಯದರ್ಶಿ ಕನಕರಾಜ ಕೆ. ವಂದಿಸಿದರು.
ಕಾರ್ಯಕ್ರಮದ ಅಂಗವಾಗಿ ವಿವಿಧ ಸ್ಪರ್ಧೆಗಳು ನಡೆಯಿತು. ಶಾಲಾ ರಕ್ಷಕ ಶಿಕ್ಷಕ ಸಂಘದ ವತಿಯಿಂದ ಮಕ್ಕಳಿಗೆ ಮಧ್ಯಾಹ್ನದ ಊಟವನ್ನು ಏರ್ಪಡಿಸಲಾಗಿತ್ತು. ಸಂಜೆ ಸಮಾರೋಪ ಸಮಾರಂಭದಲ್ಲಿ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.