ಚೆನ್ನೈ: ಕರ್ನಾಟಕದ ಕೆನರಾ ಮತ್ತು ಸಿಂಡಿಕೇಟ್ ಬ್ಯಾಂಕುಗಳು ಸೇರಿದಂತೆ ಪ್ರಸ್ತಾವಿಕ ಸಾರ್ವಜನಿಕ ವಲಯದ ಬ್ಯಾಂಕ್ ಗಳ ವಿಲೀನದಿಂದ ಒಂದೇ ಒಂದು ಉದ್ಯೋಗವೂ ನಷ್ಟವಾಗುವುದಿಲ್ಲ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಭರವಸೆ ನೀಡಿದ್ದಾರೆ.
ಜಾಗತಿಕ ಮಟ್ಟದ ಬಲಿಷ್ಠ ಬ್ಯಾಂಕಿಂಗ್ ವಲಯ ನಿರ್ಮಿಸುವ ಉದ್ದೇಶದೊಂದಿಗೆ 10 ಬ್ಯಾಂಕುಗಳನ್ನು 4 ಬ್ಯಾಂಕ್ ಗಳಲ್ಲಿ ವಿಲೀನಗೊಳಿಸಿದ್ದರು. ಇದರ ಬೆನ್ನಲ್ಲೇ ಬ್ಯಾಂಕ್ ಉದ್ಯೋಗಿಗಳಿಗೆ ಕೆಲಸ ಕಳೆದಕೊಳ್ಳುವ ಭಯ ಕಾಡುತ್ತಿದೆ.
ಇದಕ್ಕೆ ಸ್ಪಷ್ಟಿಕರಣ ನೀಡಿರುವ ನಿರ್ಮಲಾ ಸೀತಾರಾಮನ್ ಅವರು ಬ್ಯಾಂಕುಗಳ ವಿಲೀನದಿಂದ ಉದ್ಯೋಗ ನಷ್ಟವಾಗುವುದಿಲ್ಲ. ಯಾವ ಉದ್ಯೋಗಿಯನ್ನೂ ಮನೆಗೆ ಕಳುಹಿಸುವುದಿಲ್ಲ ಎಂದು ಭರವಸೆ ನೀಡಿದ್ದಾರೆ.
ಬ್ಯಾಂಕುಗಳ ವಿಲೀನದಿಂದ ಉದ್ಯೋಗ ನಷ್ಟವಾಗುತ್ತದೆ ಎಂಬುದು ಸಂಪೂರ್ಣ ತಪ್ಪು ಮಾಹಿತಿ. ಈ ಬ್ಯಾಂಕ್ ಗಳಲ್ಲಿರುವ ಪ್ರತಿಯೊಂದು ನೌಕರರ ಸಂಘಟನೆಗೂ ಪ್ರತಿಯೊಬ್ಬ ಉದ್ಯೋಗಿಗೂ ನಾನು ಕಳೆದ ಶುಕ್ರವಾರ ನೀಡಿದ ಭರವಸೆಯನ್ನೇ ಮತ್ತೊಮ್ಮೆ ನೆನಪಿಸುತ್ತಿದ್ದೇನೆ ಎಂದರು.