ಮಂಜೇಶ್ವರ: ಮೀಯಪದವು ವಿದ್ಯಾವರ್ಧಕ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಓಣಂ ಹಬ್ಬವನ್ನು ಆಚರಿಸಲಾಯಿತು. ಶಾಲಾ ಆಡಳಿತ ಸಲಹೆಗಾರ ಶ್ರೀಧರ ರಾವ್. ಆರ್.ಎಂ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭ ಪ್ರತೀ ತರಗತಿಯಲ್ಲಿ ವಿದ್ಯಾರ್ಥಿಗಳಿಂದ ಪೂಕಳಂ ರಚಿಸಲಾಯಿತು. ವಿದ್ಯಾರ್ಥಿಗಳಿಂದ ವಿವಿಧ ಆಟೋಟ ಸ್ಪರ್ಧೆಗಳು ಜರಗಿದವು. ಓಣಂ ಹಬ್ಬದ ಪ್ರಯುಕ್ತ ವಿದ್ಯಾರ್ಥಿಗಳಿಗೆ ವಿಶೇಷ ಭೋಜನ ವ್ಯವಸ್ಥೆ ಮಾಡಲಾಯಿತು.