ನವದೆಹಲಿ: ಒಂದು ವಾರಗಳ ಅಮೆರಿಕ ಪ್ರವಾಸ ಮುಕ್ತಾಯಗೊಳಿಸಿ ಪ್ರಧಾನಿ ನರೇಂದ್ರ ಮೋದಿ ನಿನ್ನೆ ಭಾರತಕ್ಕೆ ವಾಪಸ್ಸಾಗಿದ್ದಾರೆ.
ಭಾರತಕ್ಕೆ ಆಗಮಿಸುತ್ತಿದ್ದಂತೆಯೇ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ 5 ವರ್ಷಗಳಲ್ಲಿ ಜಗತ್ತಿನಾದ್ಯಂತ ಭಾರತದ ಗೌರವ ಹೆಚ್ಚಿದೆ ಎಂದು ಹೇಳಿದ್ದಾರೆ.
ಐದು ವರ್ಷಗಳಲ್ಲಿ ನಾನು ಬಹುದೊಡ್ಡ ಬದಲಾವಣೆಯನ್ನು ನೋಡಿದ್ದೇನೆ, ಭಾರತದೆಡೆಗಿನ ಗೌರವ ಹಾಗೂ ಉತ್ಸಾಹ ಹೆಚ್ಚಾಗಿದೆ ಎಂದು ಮೋದಿ ಹೇಳಿದ್ದಾರೆ.