HEALTH TIPS

ವಿಧಿ 370 ರದ್ದತಿ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್, ವಿಚಾರಣೆ ನ.14ಕ್ಕೆ ಮುಂದೂಡಿಕೆ

         
     ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುತ್ತಿದ್ದ ವಿಧಿ 370 ರದ್ದು ಮಾಡಿದ ಕೇಂದ್ರ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನ ಸಾಂವಿಧಾನಿಕ ಪೀಠ ಈ ಸಂಬಂಧ ಸರ್ಕಾರಕ್ಕೆ ನೋಟಿಸ್ ನೀಡಿ ವಿಚಾರಣೆಯನ್ನು ನವೆಂಬರ್ 14ಕ್ಕೆ ಮುಂದೂಡಿದೆ.
    ಮೊನ್ನೆಯಷ್ಟೇ ಸುಪ್ರೀಂ ಕೋರ್ಟ್ ವಿಧಿ 370 ರದ್ದು ಮಾಡಿದ ಕೇಂದ್ರ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ದಾಖಲಾಗಿರುವ ಎಲ್ಲ ಪ್ರಕರಣಗಳನ್ನು ವಿಚಾರಣೆಗಾಗಿ ಸಾಂವಿಧಾನಿಕ ಪೀಠಕ್ಕೆ ರವಾನೆ ಮಾಡಿತ್ತು. ಅದರಂತೆ ಇಂದು ಈ ಅರ್ಜಿಗಳ ವಿಚಾರಣೆ ಆರಂಭಿಸಿದ ಸಾಂವಿಧಾನಿಕ ಪೀಠ  ಕೇಂದ್ರ ಸರ್ಕಾರಕ್ಕೆ ನೋಟಿಸ್  ನೀಡಿದೆ.
    ನಿನ್ನೆ ಮುಖ್ಯನ್ಯಾಯಮೂರ್ತಿ ರಂಜನ್  ಗೊಗೊಯ್? ನೇತೃತ್ವದ ಸಾಂವಿಧಾನಿಕ ಪೀಠ ವಿಚಾರಣೆ ನಡೆಸಿ, ಜಮ್ಮುಕಾಶ್ಮಿರದ ವಿಶೇಷ ಸ್ಥಾನಮಾನ ರದ್ದತಿಯ ಬಗ್ಗೆ ಎದ್ದಿರುವ ಆಕ್ಷೇಪಗಳಿಗೆ ಇನ್ನು ನಾಲ್ಕು ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನೋಟಿಸ್? ನೀಡಿದೆ. ಅಲ್ಲದೆ ಅರ್ಜಿ ವಿಚಾರಣೆಯನ್ನು ನವೆಂಬರ್ 14ಕ್ಕೆ ಮುಂದೂಡಿದೆ.
    ಜಮ್ಮುಕಾಶ್ಮೀರದ 370ನೇ ವಿಧಿಯನ್ನು ಕೇಂದ್ರ ಸರ್ಕಾರ ಆಗಸ್ಟ್? 5ರಂದು ರದ್ದುಗೊಳಿಸಿತ್ತು. ಬಳಿಕ ಜಮ್ಮುಕಾಶ್ಮೀರ ಮತ್ತು ಲಡಾಕ್ ಗೆ ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿತ್ತು. ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಈ ಕ್ರಮವನ್ನು ಪ್ರಶ್ನಿಸಿ ರಾಜ್ಯಸಭಾ ಸದಸ್ಯ ವೈಕೋ ಸೇರಿದಂತೆ ಹಲವರು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries