ಮುಳ್ಳೇರಿಯ: ಕೃಷಿಕರಿಗೆ ಬಡ್ಡಿರಹಿತ ಸಾಲವನ್ನು ನೀಡುವಂತೆ, ಸಬ್ಸಿಡಿ ದರದಲ್ಲಿ ಕೃಷಿ ಉಪಕರಣಗಳನ್ನು ಸಹಕಾರಿ ಸಂಸ್ಥೆಗಳ ಮೂಲಕ ಒದಗಿಸುವಂತೆಯೂ ಮತ್ತು ಸಹಕಾರಿ ಸಂಸ್ಥೆಗಳನ್ನು ದುರ್ಬಲಪಡಿಸುವಂತಹಾ ಯಾವುದೇ ತೀರ್ಮಾನಗಳನ್ನು ಕೈಗೊಳ್ಳದಂತೆ ಕೇರಳ ರಾಜ್ಯ ಸರಕಾರವನ್ನು ಮುಳ್ಳೇರಿಯ ಗಣೇಶ ಕಲಾಮಂದಿರದಲ್ಲಿ ಇತ್ತೀಚೆಗೆ ನಡೆದ ಪಯಸ್ವಿನಿ ಕೃಷಿ ಅಭಿವೃದ್ಧಿ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಒತ್ತಾಯಿಸಿದೆ.
ಸಹಕಾರಿ ಸಂಘದ ಅಧ್ಯಕ್ಷ ಐತ್ತಪ್ಪ ಮವ್ವಾರು ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಶ್ರೀರಾಮ.ಬಿ ವಾರ್ಷಿಕ ವರದಿ ಮತ್ತು ಲೆಕ್ಕಪತ್ರ ಮಂಡಿಸಿದರು. ನಿರ್ದೇಶಕರಾದ ರಘುರಾಮ, ವಾಮನ ಆಚಾರ್ಯ, ಗೀತಾ.ಪಿ, ದಿವಾಕರ ಮೊದಲಾದವರು ಉಪಸ್ಥಿತರಿದ್ದರು.
ರಮೇಶ.ಕೆ ಪ್ರಾರ್ಥನೆ ಹಾಡಿದರು. ಉಪಾಧ್ಯಕ್ಷ ಗಂಗಾಧರ ರಾವ್ ಯಂ ಸ್ವಾಗತಿಸಿದರು. ನಿರ್ದೇಶಕ ಮಾಧವ ಭಟ್ ವಂದಿಸಿದರು.