ಕಾಸರಗೋಡು: ರಾಜ್ಯ ಪುನರ್ವಿಂಗಡಣೆಯ ಸಂದರ್ಭದಲ್ಲಿ ಅನ್ಯಾಯವಾಗಿ ಕೇರಳಕ್ಕೆ ಸೇರ್ಪಡೆಗೊಂಡ ನಂತರ ಕಾಸರಗೋಡಿನ ಕನ್ನಡಿಗರು ಅನುಭವಿಸುತ್ತಿರುವ ಸಮಸ್ಯೆಗಳ ಕುರಿತಾಗಿ ಕೇರಳ ಸರಕಾರದ ಗಮನ ಸೆಳೆಯಲು ನ.1 ರಂದು ಕನ್ನಡ ಹೋರಾಟ ಸಮಿತಿ ನೇತೃತ್ವದಲ್ಲಿ ಆಯೋಜಿಸಿದ ಕನ್ನಡಿಗರ ಹಕ್ಕು ಸಂರಕ್ಷಣಾ ದಿನಾಚರಣೆಯನ್ನು ಪ್ರತಿಕೂಲ ಹವಾಮಾನದ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ ಎಂದು ಕನ್ನಡ ಹೋರಾಟ ಸಮಿತಿ ಅಧ್ಯಕ್ಷ ನ್ಯಾಯವಾದಿ ಮುರಳೀಧರ ಬಳ್ಳುಕ್ಕುರಾಯ ಹಾಗೂ ಪ್ರಧಾನ ಕಾರ್ಯದರ್ಶಿ ಭಾಸ್ಕರ ಕಾಸರಗೋಡು ಅವರು ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕನ್ನಡಿಗರ ಹಕ್ಕು ಸಂರಕ್ಷಣಾ ದಿನಾಚರಣೆ ಅಂಗವಾಗಿ ಕರಂದಕ್ಕಾಡ್‍ನ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಧರಣಿ ಸತ್ಯಾಗ್ರಹ ನಡೆಸಲು ಉದ್ದೇಶಿಸಲಾಗಿತ್ತು. ಧರಣಿ ಸತ್ಯಾಗ್ರಹವನ್ನೂ ಮುಂದೂಡಲಾಗಿದೆ.