ಕೇರಳ: ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶಬರಿಮಲೆಗೆ ಮಹಿಳೆಯರ ಪ್ರವೇಶ ಕುರಿತ ತೀರ್ಪಿನ ಮರು ಪರಿಶೀಲನಾ ಅರ್ಜಿ ಬಗ್ಗೆ ಸುಪ್ರೀಂಕೋರ್ಟಿನ ವಿಸ್ತೃತ ಪೀಠ ಅಂತಿಮ ತೀರ್ಪು ಪ್ರಕಟಿಸುವವರೆಗೆ ದೇವಾಲಯಕ್ಕೆ ಮಹಿಳೆಯರಿಗೆ ಪ್ರವೇಶ ಅವಕಾಶ ಕಲ್ಪಿಸಬೇಕು ಎಂದು ಮಹಿಳಾ ಹೋರಾಟಗಾರ್ತಿ ತೃಪ್ತಿ ದೇಸಾಯಿ ಆಗ್ರಹಿಸಿದ್ದಾರೆ.
ಸುಪ್ರೀಂಕೋರ್ಟ್ ತೀರ್ಪು ಬಂದ ಬಳಿಕ ಪ್ರತಿಕ್ರಿಯಿಸಿದ ತೃಪ್ತಿ ದೇಸಾಯಿ, ಅಂತಿಮ ತೀರ್ಪು ಪ್ರಕಟಿಸುವವರೆಗೆ ಮಹಿಳೆಯರ ದೇವಾಲಯ ಪ್ರವೇಶಕ್ಕೆ ಅವಕಾಶ ಕಲ್ಪಿಸಬೇಕು.ಯಾರೊಬ್ಬರು ವಿರೋಧಿಸಬಾರದು.ನಿರ್ದಿಷ್ಟ ವಯೋಮಾನದ ಮಹಿಳೆಯರಿಗೆ ಅವಕಾಶ ನೀಡುತ್ತಿಲ್ಲವಾದ್ದರಿಂದ ಮಹಿಳೆಯರಿಗೆ ಯಾವುದೇ ತಾರತಾಮ್ಯ ಮಾಡುತ್ತಿಲ್ಲ ಎಂದು ಹೇಳುವುದು ತಪ್ಪು .ಇದೇ ತಿಂಗಳ 16 ರಂದು ಶಬರಿಮಲೆಗೆ ತೆರಳಿ ಪ್ರಾರ್ಥನೆ ಸಲ್ಲಿಸುವುದಾಗಿ ತಿಳಿಸಿದರು.ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ 10 ರಿಂದ 50 ವರ್ಷ ವಯೋಮಾನದ ಮಹಿಳೆಯರಿಗೆ ಪ್ರವೇಶಕ್ಕೆ ಅನುಮತಿಸಿ ಸುಪ್ರೀಂಕೋರ್ಟ್ ತೀರ್ಪು ನೀಡಿದ ಬಳಿಕ ಕಳೆದ ವರ್ಷ ನವೆಂಬರ್ ತಿಂಗಳಲ್ಲಿ ತೃಪ್ತಿ ದೇಸಾಯಿ ದೇಗುಲ ಪ್ರವೇಶಕ್ಕೆ ಪ್ರಯತ್ನಿಸಿ ವಿಫಲರಾಗಿದ್ದರು.
ಮರುಪರಿಶೀಲನಾ ಅರ್ಜಿಯನ್ನು ವಿಸ್ತೃತಾ ಪೀಠಕ್ಕೆ ವರ್ಗಾಯಿಸಿದದ್ದು ಏಕೆ ಎಂದು ಮತ್ತೊರ್ವ ಮಹಿಳಾ ಪರ ಹೋರಾಟಗಾರ್ತಿ ಕವಿತಾ ಕೃಷ್ಣನ್ ಪ್ರಶ್ನಿಸಿದ್ದಾರೆ.