ಮುಳ್ಳೇರಿಯ: ಕಾಸರಗೋಡು ಜಿಲ್ಲಾ ಶಿವಳ್ಳಿ ಬ್ರಾಹ್ಮಣ ಸಭಾದ ಅಂಗಸಂಸ್ಥೆಯಾದ ಮುಳ್ಳೇರಿಯ ವಲಯ ಶಿವಳ್ಳಿ ಬ್ರಾಹ್ಮಣ ಸಭಾದ ಮಾಸಿಕ ಸಭೆಯು ನ.17ರಂದು ಅಪರಾಹ್ನ 2ರಿಂದ ಅಡೂರಿನ ವಿದ್ಯಾಭಾರತೀ ವಿದ್ಯಾಲಯದಲ್ಲಿ ನಡೆಯಲಿದೆ. ವಲಯ ಅಧ್ಯಕ್ಷ ನೂಜಿಬೆಟ್ಟು ವೆಂಕಟಕೃಷ್ಣ ಕಾರಂತ ಅಧ್ಯಕ್ಷತೆ ವಹಿಸುವರು. ಕಾಸರಗೋಡು ಜಿಲ್ಲಾ ಶಿವಳ್ಳಿ ಬ್ರಾಹ್ಮಣ ಸಭಾದ ಅಧ್ಯಕ್ಷೆ ಸತ್ಯಪ್ರೇಮಾ ಎಂ. ಭಾರಿತ್ತಾಯ ಉಪಸ್ಥಿತರಿರುವರು. ಈ ಸಂದರ್ಭದಲ್ಲಿ `ರಕ್ತದೊತ್ತಡ ಹಾಗೂ ಮಧುಮೇಹ ನಿಯಂತ್ರಣ ಹಾಗೂ ಮುಂಜಾಗ್ರತೆ' ವಿಚಾರದಲ್ಲಿ ನಿವೃತ್ತ ವೈದ್ಯಾಧಿಕಾರಿ ಡಾ.ರವಿಪ್ರಸಾದ್ ಬೆಳ್ಳೂರು ಮಾಹಿತಿ ನೀಡಲಿದ್ದಾರೆ. ಸಮುದಾಯ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಸಭೆಯಲ್ಲಿ ಉಪಸ್ಥಿತರಿದ್ದು, ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕಾಗಿ ಪ್ರಕಟಣೆ ತಿಳಿಸಿದೆ.
ನ.17 ರಂದು ಶಿವಳ್ಳಿ ಮಾಸಿಕ ಸಭೆ
0
ನವೆಂಬರ್ 14, 2019