ಬದಿಯಡ್ಕ: ಬದಿಯಡ್ಕ: ಕ್ಷೇತ್ರಗಳ ನಿರ್ಮಾಣದ ಮೂಲಕ ಸ್ಥಳದಲ್ಲಿ ಧನಾತ್ಮಕ ಚೈತನ್ಯ ಮೂಡಿಬರುವುದರೊಂದಿಗೆ ಋಣಾತ್ಮಕವಾದ ದುಷ್ಟ ಶಕ್ತಿಗಳು ದೂರವಾಗುತ್ತವೆ. ತನ್ಮೂಲಕ ಆ ಪ್ರದೇಶದಲ್ಲಿ ಪ್ರಾರ್ಥಿಸುವ ಭಕ್ತರಿಗೆ ಸದಾ ಒಳಿತಾಗುತ್ತದೆ. ಜೀರ್ಣೋದ್ಧಾರ ಕಾರ್ಯಗಳು ದೇವತಾ ಸಾನ್ನಿಧ್ಯಕ್ಕೆ ಶಕ್ತಿಯನ್ನು ತುಂಬುತ್ತದೆ ಎಂದು ಧಾರ್ಮಿಕ ಮುಂದಾಳು ಬ್ರಹ್ಮಶ್ರೀ ರವೀಶ ತಂತ್ರಿ ಕುಂಟಾರು ಹೇಳಿದರು.
ಗೋಸಾಡ ಶ್ರೀ ಮಹಿಷರ್ಮನಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ರೂಪೀಕರಣ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.
ಸೇವಾಸಮಿತಿಯ ಉಪಾಧ್ಯಕ್ಷ ರವೀಂದ್ರ ರೈ ಗೋಸಾಡ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ಧಾರ್ಮಿಕ ಮುಂದಾಳು ಬಿ.ವಸಂತ ಪೈ ಬದಿಯಡ್ಕ, ಅಗಲ್ಪಾಡಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಆಡಳಿತ ಮೊಕ್ತೇಸರ ವಾಸುದೇವ ಭಟ್ ಉಪ್ಪಂಗಳ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಕುದ್ಕಾಡಿ ನಾರಾಯಣ ರೈ, ಉಪಾಧ್ಯಕ್ಷ ಎಂ.ಸಂಜೀವ ಶೆಟ್ಟಿ ಮೊಟ್ಟೆಕುಂಜ, ಉಬ್ರಂಗಳ ಶ್ರೀ ಮಹಾದೇವ ಪಾರ್ವತಿ ಶಾಸ್ತಾರ ದೇವಸ್ಥಾನದ ಆಡಳಿತ ಮೊಕ್ತೇಸರ ಜಯರಾಜ್ ಕುಣಿಕುಳ್ಳಾಯ, ಆಲಿಂಜ ಶ್ರೀ ಮಹಾವಿಷ್ಣು ದೇವಸ್ಥಾನದ ಅಧ್ಯಕ್ಷ ನಾರಾಯಣ ರೈ ಬೆಳಿಂಜ, ಸತ್ಯಮೂರ್ತಿ ಅಮ್ಮಣ್ಣಾಯ ಪಾವೂರು, ಶ್ರೀನಿವಾಸ ಅಮ್ಮಣ್ಣಾಯ ಪಾವೂರು, ಜೀರ್ಣೋದ್ಧಾರ ಸಮಿತಿಯ ಉಪಾಧ್ಯಕ್ಷರುಗಳಾದ ಐತ್ತಪ್ಪ ಮವ್ವಾರು, ರಾಘವ ಬೆಳ್ಳಿಗೆ, ಪ್ರಧಾನ ಕಾರ್ಯದರ್ಶಿ ಎಂ.ಪ್ರಭಾಕರ ರೈ ಮಠದಮೂಲೆ, ಕೋಶಾಧಿಕಾರಿ ಶಂಕರನಾರಾಯಣ ಮಯ್ಯ ಬದಿಯಡ್ಕ, ಧಾರ್ಮಿಕ ಮುಂದಾಳು ಡಾ. ವೇಣುಗೋಪಾಲ ಕಳೆಯತ್ತೋಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬದಿಯಡ್ಕ ವಲಯ ಮೇಲ್ವಿಚಾರಕ ಧನಂಜಯ, ಸೇವಾ ಸಮಿತಿಯ ಕೋಶಾಧಿಕಾರಿ ಪರಮೇಶ್ವರ ಭಟ್ ಗೋಸಾಡ, ಹಿರಿಯ ಸದಸ್ಯ ಅನಂತ ಭಟ್ ಗೋಸಾಡ, ಮಾತೃ ಮಂಡಳಿಯ ಅಧ್ಯಕ್ಷೆ ಉಮಾವತಿ ರೈ ಬೆಳಿಂಜ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಬ್ರಹ್ಮಕಲಶೋತ್ಸವ ಸಮಿತಿ ರೂಪೀಕರಣ :
ಗೋಸಾಡ ಶ್ರೀ ಮಹಿಷಮರ್ದಿüನಿ ದೇವಸ್ಥಾನದ ಬ್ರಹ್ಮಕಲಶೋತ್ಸವವು 2020 ಫೆಬ್ರವರಿ 6ರಿಂದ ಫೆ.12ರ ತನಕ ನಡೆಯಲಿರುವುದು. ಅಧ್ಯಕ್ಷರಾಗಿ ಧಾರ್ಮಿಕ, ಸಾಮಾಜಿಕ ಮುಂದಾಳು ಎಂ. ಸಂಜೀವ ಶೆಟ್ಟಿ ಮೊಟ್ಟೆಕುಂಜ, ಪ್ರಧಾನ ಕಾರ್ಯದರ್ಶಿಯಾಗಿ ಡಾ. ವೇಣುಗೋಪಾಲ ಕಳೆಯತ್ತೋಡಿ, ಕೋಶಾಧಿಕಾರಿಯಾಗಿ ಶ್ರೀನಿವಾಸ ಅಮ್ಮಣ್ಣಾಯ ಪಾವೂರು ಇವರು ಆಯ್ಕೆಯಾದರು. ಇದೇ ವೇಳೆ ವಿವಿಧ ಉಪಸಮಿತಿಗಳನ್ನೂ ರೂಪೀಕರಿಸಲಾಯಿತು. ಪುಟಾಣಿ ಮಕ್ಕಳ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಸೇವಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಎಂ.ಸುಧಾಮ ಗೋಸಾಡ ಸ್ವಾಗತಿಸಿ, ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಡಾ. ವೇಣುಗೋಪಾಲ ಕಳೆಯತ್ತೋಡಿ ವಂದಿಸಿದರು. ನಾರಾಯಣ ಗೋಸಾಡ ಕಾರ್ಯಕ್ರಮವನ್ನು ನಿರೂಪಿಸಿದರು.