ನವದೆಹಲಿ: ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಕಾಂಗ್ರೆಸ್ ದೇಶವ್ಯಾಪಿ ಪ್ರತಿಭಟನೆ ನಡೆಸಲು ಸಜ್ಜಾಗಿದೆ.
ರಾಜ್ಯ ಮಟ್ಟದಲ್ಲಿ ಪ್ರತಿಭಟನೆಗಳಿಗೆ ಕರೆ ನೀಡಿರುವ ಕಾಂಗ್ರೆಸ್ ನ.30 ರಂದು ನವದೆಹಲಿಯ ರಾಮ್ ಲೀಲಾ ಮೈದಾನದಲ್ಲಿ ಭಾರತ್ ಬಚಾವೋ ರ್ಯಾಲಿ ಹಮ್ಮಿಕೊಳ್ಳುವುದಾಗಿ ಘೋಷಿಸಿದೆ.
ನ.05 ರಿಂದ 15 ವರೆಗೆ ದೇಶದ ವಿವಿಧ ಭಾಗಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನಾ ಮೆರವಣಿಗೆಯನ್ನು ಕಾಂಗ್ರೆಸ್ ಪಕ್ಷ ನಡೆಸಲಿದೆ, ನ.25 ವರೆಗೆ ಎಲ್ಲಾ ಜಿಲ್ಲೆ ಹಾಗೂ ರಾಜ್ಯಮಟ್ಟದಲ್ಲಿ ಪ್ರತಿಭಟನೆಯನ್ನು ಪೂರ್ಣಗೊಳಿಸುವುದಾಗಿ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಮಾಧ್ಯಮಗಳಿಗೆ ಹೇಳಿದ್ದಾರೆ.