ಕಾಸರಗೋಡು: ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಕಾಸರಗೋಡು, ಬೇಕಲ-ಹೊಸದುರ್ಗ ಉಪಜಿಲ್ಲಾ ಸಮ್ಮೇಳನವು ನ.೧೦ರಂದು ಕಾಸರಗೋಡಿನ ಕನ್ನಡ ಅಧ್ಯಾಪಕ ಭವನದಲ್ಲಿ ನಡೆಯುವುದು.
ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಅಧ್ಯಕ್ಷ ಎಸ್.ವಿ.ಭಟ್ ಅವರು ಅಂದು ಬೆಳಗ್ಗೆ ೧೦ ಗಂಟೆಗೆ ಸಮ್ಮೇಳನವನ್ನು ಉದ್ಘಾಟಿಸುವರು. ಸಂಘದ ಕಾಸರಗೋಡು ಉಪಜಿಲ್ಲಾ ಅಧ್ಯಕ್ಷರಾದ ಶ್ಯಾಮಪ್ರಸಾದ್ ಕೆ.ಕಲ್ಲಕಟ್ಟ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸುವರು.
ಕಾಸರಗೋಡು ಜಿಲ್ಲಾ ವಿದ್ಯಾಧಿಕಾರಿ ನಂದಿಕೇಶನ್ ಎನ್, ಕಾಸರಗೋಡು ಉಪಜಿಲ್ಲಾ ವಿದ್ಯಾಧಿಕಾರಿ ಅಗಸ್ಟಿನ್ ಬರ್ನಾಡ್ ಮುಖ್ಯ ಅತಿಥಿಗಳಾಗಿರುವರು.
ಅಧ್ಯಾಪಕರ ಸಂಘದ ಅಧಿಕೃತ ವಕ್ತಾರ ವಿಶಾಲಾಕ್ಷ ಪುತ್ರಕಳ, ಕೇಂದ್ರ ಸಮಿತಿ ಪ್ರಧಾನ ಕಾರ್ಯದರ್ಶಿ ಕುಮಾರ ಸುಬ್ರಹ್ಮಣ್ಯ, ಬೇಕಲ-ಹೊಸದುರ್ಗ ಉಪಜಿಲ್ಲಾ ಅಧ್ಯಕ್ಷ ವಿಶ್ವನಾಥ ಎನ್. ಶುಭ ಹಾರೈಸುವರು.
ಕಾಸರಗೋಡು ಉಪಜಿಲ್ಲಾ ಕಾರ್ಯದರ್ಶಿ ದಿನೇಶ ಬಿ.ಕೆ, ಬೇಕಲ-ಹೊಸದುರ್ಗ ಉಪಜಿಲ್ಲಾ ಕಾರ್ಯದರ್ಶಿ ಶ್ರೀಲತ, ಕಾಸರಗೋಡು ಉಪಜಿಲ್ಲಾ ಕೋಶಾಧಿಕಾರಿ ವೆಂಕಟಕೃಷ್ಣ ಉಪಸ್ಥಿತರಿರುವರು.