ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಅವರ ಕುಟುಂಬ ಸದಸ್ಯರಿಗೆ ನೀಡಲಾಗಿದ್ದ ಎಸ್‌ಪಿಜಿ ಭದ್ರತೆಯನ್ನು ಕೇಂದ್ರ ಸರ್ಕಾರ ಕಡಿತಗೊಳಿಸಿದ್ದು, ಝಡ್ ಪ್ಲಸ್ ಸೆಕ್ಯೂರಿಟಿ ಮುಂದುವರಿಸಿದೆ. ಸರ್ಕಾರದ ಈ ನಡೆಯನ್ನು ಕಾಂಗ್ರೆಸ್ ಮುಖಂಡರು ಖಂಡಿಸಿದ್ದಾರೆ
ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರಿಗೆ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಝಡ್-ಪ್ಲಸ್ ಭದ್ರತೆಯನ್ನು ಮುಂದುವರಿಸಲಿದೆ. ಭದ್ರತೆಯನ್ನು ವಹಿಸಿಕೊಳ್ಳಲು ಸಿಆರ್ ಪಿಎಫ್ ಸಿಬ್ಬಂದಿ ಈಗಾಗಲೇ ರಾಹುಲ್ ಗಾಂಧಿಯವರ ೧೨ ತುಘಲಕ್ ಲೇನ್ ನಿವಾಸವನ್ನು ತಲುಪಿದ್ದಾರೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಗಾಂಧಿ ಕುಟುಂಬದ ಸದಸ್ಯರಿಗೆ ನೀಡಿದ್ದ, ಎಸ್‌ಪಿಜಿ ಭದ್ರತೆ ಹಿಂತೆಗೆದುಕೊಳ್ಳುವ ಸರ್ಕಾರದ ನಿರ್ಧಾರಕ್ಕೆ ತೀವ್ರವಾಗಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಮುಖಂಡರು, ಭಯೋತ್ಪಾದನೆ ಮತ್ತು ಹಿಂಸಾಚಾರದಿAದಾಗಿ ಸಾವನ್ನಪ್ಪಿದ ಇಬ್ಬರು ಮಾಜಿ ಪ್ರಧಾನ ಮಂತ್ರಿಗಳ ಕುಟುಂಬ ಸದಸ್ಯರ ಜೀವನದೊಡನೆ ಬಿಜೆಪಿ ಸರ್ಕಾರ ರಾಜಿ ಮಾಡಿಕೊಳ್ಳುತ್ತಿದೆ" ಎಂದು ಕಿಡಿಕಾರಿದ್ದಾರೆ.