ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹಾಗೂ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿದ ಬಳಿಕ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಮುಖಂಡ ಅಶೋಕ್ ಚವ್ಹಾಣ್, ಅಧಿಕಾರ ಹಣಕ್ಕಿಂತಲೂ ಸಂವಿಧಾನ, ಪ್ರಜಾಪ್ರಭುತ್ವ ಹೆಚ್ಟು ಶಕ್ತಿಯುತವಾದದ್ದು ಎಂಬುದು ಇಂದು ಸಾಬೀತಾಗಿದೆ ಎಂದಿದ್ದಾರೆ.
ವಿಶ್ವಾಸಮತ ಯಾಚಿಸುವಂತೆ ಸುಪ್ರೀಂಕೋರ್ಟ್ ಆದೇಶದ ಬೆನ್ನೆಲ್ಲೆ ಬಹುಮತದ ಕೊರತೆ ಮನವರಿಕೆಯಾಗಿ ಫಡ್ನವೀಸ್, ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದರು.ಪ್ರಜಾಪ್ರಭುತ್ವದಲ್ಲಿ ಸಂವಿಧಾನವೇ ಸುಪ್ರೀಂ. ಅದು ಹಣ, ಅಧಿಕಾರಕ್ಕಿಂತಲೂ ಹೆಚ್ಚು ಶಕ್ತಿಯುತವಾದದ್ದು ಎಂದು ಮಹಾರಾಷ್ಟ್ರ ಕಾಂಗ್ರೆಸ್ ಘಟಕ ಟ್ವೀಟ್ ಮಾಡಿದೆ .