HEALTH TIPS

ಗಡಿನಾಡ ಕನ್ನಡ ರಾಜ್ಯೋತ್ಸವ ನ.೨೩ ರಂದು-ಆಮoತ್ರಣ ಪತ್ರಿಕೆ ಬಿಡುಗಡೆ

           ಬದಿಯಡ್ಕ: ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ಕನ್ನಡಿಗರನ್ನು ಒಟ್ಟುಗೂಡಿಸಿ ಭಾಷೆಯ ಸಂರಕ್ಷಣೆಗೆ, ಪರಸ್ಪರ ಒಗ್ಗಟ್ಟಿನಿಂದ ಕನ್ನಡಿಗರ ಸಂರಕ್ಷಣೆಗೆ ಪ್ರಯತ್ನಿಸುವ ಅಕಾಡೆಮಿಯ ಕಾರ್ಯಶ್ಲಾಘನೀಯ. ಪ್ರತಿಭೆಗಳ ಪಾಲಿನ ಪ್ರೋತ್ಸಾಹದ ಚಿಲುಮೆಯಾಗಿರುವ ಅಕಾಡೆಮಿಯು ಸಾಧಕರನ್ನು ಗೌರವಿಸುವ ಮೂಲಕ ಸಮಾಜದ ಎಲ್ಲಾ ವಿಭಾಗದ ಜನರನ್ನೂ ತನ್ನತ್ತ ಆಕರ್ಷಿಸುವಲ್ಲಿ ಯಶಸ್ವಿಯಾಗಿದೆ ಎಂದು ಕೊಡುಗೈ ದಾನಿ ಸಾಯಿರಾಂ ಗೋಪಾಲಕೃಷ್ಣ ಭಟ್ ಕಿಳಿಂಗಾರ್ ಹೇಳಿದರು.
     ಅವರು ಕಿಳಿಂಗಾರಿನ ಅವರ ನಿವಾಸದಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಕಾಸರಗೋಡು ಹಾಗೂ ಕೈರಳಿ ಪ್ರಕಾಶನ ಸುಬ್ಬಯ್ಯಕಟ್ಟೆ ಜಂಟಿ ಆಶ್ರಯದಲ್ಲಿ ನ.೨೩ರಂದು ಕಾಸರಗೋಡು ಕ್ಯಾಪಿಟಲ್ ಇನ್ ಸಭಾಂಗಣದಲ್ಲಿ ಜರಗಲಿರುವ ಗಡಿನಾಡ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬುಧವಾರ ಬಿಡುಗಡೆಗೊಳಿಸಿ ಮಾತನಾಡಿದರು.
     ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕರ್ನಾಟಕ ಜಾನಪದ ಪರಿಷತ್ತು ಕೇರಳ ಗಡಿನಾಡ ಘಟಕದ ಅಧ್ಯಕ್ಷ ಎ.ಆರ್.ಸುಬ್ಬಯ್ಯಕಟ್ಟೆ ಮಾತನಾಡಿ ಕನ್ನಡದ ಉಳಿವಿಗಾಗಿ ಹಮ್ಮಿಕೊಂಡ ಈ ವಿಶೇಷ ಕಾರ್ಯಕ್ರಮವು ಅತ್ಯಂತ ಯಶಸ್ವೀ ಕಾರ್ಯಕ್ರಮವಾಗಿ ಮೂಡಿಬರಲಿ ಎಂದು ಶುಭ ಹಾರೈಸಿದರು. ಅಕಾಡೆಮಿ ಉಪಾಧ್ಯಕ್ಷ ಪ್ರೊ.ಎ.ಶ್ರೀನಾಥ್ ಅಧ್ಯಕ್ಷತೆವಹಿಸಿದ್ದರು. ಜಾನಪದ ಪರಿಷತ್ತು ಕರಳ ಗಡಿನಾಡ ಘಟಕದ ಸದಸ್ಯೆ ಪುಷ್ಪಾವತಿ ನೆಟ್ಟಣಿಗೆ ಅಕಾಡೆಮಿ ಸದಸ್ಯೆ ಉಮಾವತಿ, ಆಶಾ ಶುಭಾಶಂಸನೆಗೈದರು. ಅಕಾಡಮಿ ಪ್ರಧಾನ ಕಾರ್ಯದರ್ಶಿ ಅಖಿಲೇಶ್ ನಗುಮುಗಂ ಸ್ವಾಗತಿಸಿ, ಜಾನಪದ ಪರಿಷತ್ತು ಕೇರಳ ಗಡಿನಾಡ ಘಟಕದ ಸದಸ್ಯೆ ಜಯಂತಿ ಅಡೂರು ವಂದಿಸಿದರು. ವಿದ್ಯಾಗಣೇಶ್ ಅಣಂಗೂರು ಕಾರ್ಯಕ್ರಮ ನಿರೂಪಿಸಿದರು.
    ಕಾಸರಗೋಡಿನ ಕ್ಯಾಪಿಟಲ್ ಇನ್ ಸಭಾಂಗಣದಲ್ಲಿ ನ.೨೩ ರಂದು ಆಯೋಜನೆಗೊಂಡಿರುವ ಗಡಿನಾಡ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಕರ್ನಾಟಕ ವಿಧಾನ ಪರಿಷತ್ತು ಪ್ರತಿಪಕ್ಷ  ನಾಯಕ ಎಸ್.ಆರ್.ಪಾಟೀಲ್ ಉದ್ಘಾಟಿಸಲಿದ್ದಾರೆ. ದ.ಕ.ಜಿಲ್ಲಾ ಕ.ಸಾ.ಪ. ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರರ ಅಧ್ಯಕ್ಷತೆಯಲ್ಲಿ ಜರಗಲಿರುವ ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ಕರ್ನಾಟಕ ಆರ್ಯ ವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್ ಲೇಖಕ, ಪತ್ರಕರ್ತ ರವಿ ನಾಯ್ಕಾಪು ಬರೆದ ಸ್ನೇಹಗಂಗೆ ಕೃತಿಯನ್ನು  ಬಿಡುಗಡೆಗೊಳಿಸುವರು. ಕರ್ನಾಟಕ ಸರ್ಕಾರದ ಕರ್ನಾಟಕ ಗಡಿ ಮತ್ತು ನದಿ ಸಂರಕ್ಷಣಾ ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ಕೆ.ಎಲ್.ಮಂಜುನಾಥ್ ವಿವಿಧ ಕ್ಷೇತ್ರದಲ್ಲಿ ಸ್ಮರಣೀಯ ಸೇವೆ ಸಲ್ಲಿಸುತ್ತಿರುವ ೧೧ ಮಂದಿ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡುವರು.
       ಮಂಜೇಶ್ವರ ಶಾಸಕ ಎಂ.ಸಿ.ಕಮುದ್ಧೀನ್, ಜಿಲ್ಲಾ ಪಂಚಾಯತು ಸದಸ್ಯ ನ್ಯಾಯವಾದಿ ಶ್ರೀಕಾಂತ್, ಕಾ.ಜ.ಪ. ಉಡುಪಿ ಜಿಲ್ಲಾಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ, ಅಕಾಡೆಮಿ ಅಧ್ಯಕ್ಷ ಪ್ರಭಾಕರ ಕಲ್ಲೂರಾಯ ಬನದಗದ್ದೆ, ಕೇರಳ ಬ್ಯಾರಿ ಅಕಾಡೆಮಿ ಅಧ್ಯಕ್ಷ ಸೈಫುಲ್ಲಾ ತಂಙಳ್, ಸಂಕಬೈಲು ಸತೀಶ ಅಡಪ, ಝಡ್ ಎ ಕಯ್ಯಾರ್, ನ್ಯಾಯವಾದಿ ಥೋಮಸ್ ಡಿ ಸೋಜಬಾಲಕೃಷ್ಣ ಅಗ್ಗಿತ್ತಾಯ, ಶ್ರೀಕಾಂತ್ ನೆಟ್ಟಣಿಗೆ, ಸಂಧ್ಯಾಗೀತಾ ಬಾಯಾರು, ವಿದ್ಯಾಗಣೇಶ್ ಅಣಂಗೂರು ಮೊದಲಾದವರು ಉಪಸ್ಥಿತರಿರುವರು.
    ಬೆಳಗ್ಗೆ ೯ರಿಂದ ಕಾಸರಗೋಡು ಸರ್ಕಾರಿ ಕಾಲೇಜಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ರಾಧಾಕೃಷ್ಣ ಬೆಳ್ಳೂರು ಅವರ ಅಧ್ಯಕ್ಷತೆಯಲ್ಲಿ ಗಡಿನಾಡ ಕ್ನನಡ ರಾಜ್ಯೋತ್ಸವ ಕವಿಗೋಷ್ಠಿ ನಡೆಯಲಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries