ಮಂಜೇಶ್ವರ: ಮಂಜೇಶ್ವರ ಉಪಜಿಲ್ಲಾ ಮಟ್ಟದ ಸಿ.ವಿ.ರಾಮನ್ ಉಪನ್ಯಾಸ ಸ್ಪರ್ಧೆಯು ಕುಂಜತ್ತೂರು ಜಿ.ವಿ.ಎಚ್.ಎಸ್.ಎಸ್. ಶಾಲೆಯಲ್ಲಿ ನಡೆಯಿತು.
ಮಂಜೇಶ್ವರ ಉಪ ಜಿಲ್ಲಾ ವಿದ್ಯಾಧಿಕಾರಿ ದಿನೇಶ್ ವಿ. ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಕುಂಜತ್ತೂರು ಜಿ.ವಿ.ಎಚ್.ಎಸ್.ಎಸ್. ಶಾಲೆಯ ಮುಖ್ಯೋಪಾಧ್ಯಾಯ ಬಾಲಕೃಷ್ಣ ಅಧ್ಯಕ್ಷತೆ ವಹಿಸಿದರು. ಮುಖ್ಯ ಅತಿಥಿಗಳಾದ ಕಿಶೋರ್, ಅಶ್ರಫ್, ಪ್ರಮೀಳಾ ಕುಮಾರಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಮಂಜೇಶ್ವರ ಉಪ ಜಿಲ್ಲೆಯ ವಿಜ್ಞಾನ ಸಂಘದ ಕಾರ್ಯದರ್ಶಿ ಕೃಷ್ಣವೇಣಿ ಬಿ. ಸ್ವಾಗತಿಸಿ,ಜೊತೆ ಕಾರ್ಯದರ್ಶಿ ಸುನೀತ ವಂದಿಸಿದರು.