ಉಪ್ಪಳ: ಶ್ರೀ ಧರ್ಮಸ್ಥಳ ಭಜನಾ ಪರಿಷತ್ ಮಂಜೇಶ್ವರ ತಾಲೂಕು ಸಮಿತಿಯ ನೇತೃತ್ವದಲ್ಲಿ ಪರಮಪೂಜ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ಆಶೀರ್ವಾದದೊಂದಿಗೆ ಕೊಂಡೆವೂರು ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ನ.೧೭ ರಂದು ಐಲ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಭಜನಾ ಸಂಗಮ -ಭಜನಾ ಮಹೋತ್ಸವ ಜರಗಲಿದೆ.
ಅಂದು ಬೆಳಗ್ಗೆ ೯.೩೦ ಕ್ಕೆ ಶೋಭಾಯಾತ್ರೆ, ೧೦.೩೦ ಕ್ಕೆ ಧಾರ್ಮಿಕ ಸಭೆ ನಡೆಯಲಿದೆ. ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ, ಕೊಂಡೆವೂರು ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿ ಅವರು ಆಶೀರ್ವಚನ ನೀಡುವರು. ಮಂಜೇಶ್ವರ ತಾಲೂಕು ಭಜನಾ ಪರಿಷತ್ ಗೌರವಾಧ್ಯಕ್ಷ ರಾಮಕೃಷ್ಣ ಕಾಟುಕುಕ್ಕೆ ಅಧ್ಯಕ್ಷತೆ ವಹಿಸುವರು. ಕಾರ್ಯಕ್ರಮದಲ್ಲಿ ಗಣ್ಯರಾದ ಬಿ.ಜಯರಾಮ ನೆಲ್ಲಿತ್ತಾಯ, ನಾರಾಯಣ ಹೆಗ್ಡೆ ಕೋಡಿಬೈಲ್, ಅಶ್ವತ್ ಪೂಜಾರಿ ಲಾಲ್‌ಬಾಗ್, ಡಾ.ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ, ಜಯಾನಂದ ಕುಮಾರ್ ಹೊಸದುರ್ಗ ಅತಿಥಿಗಳಾಗಿ ಭಾಗವಹಿಸುವರು.
ಮಧ್ಯಾಹ್ನ ೧೨ ಕ್ಕೆ ಭಜನಾ ಕಾರ್ಯಾಗಾರ, ಮಧ್ಯಾಹ್ನ ೨ ರಿಂದ ಕುಣಿತ ಭಜನೋತ್ಸವ, ಸಂಜೆ ೪ ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ. ಕಾರ್ಯಕ್ರಮದಲ್ಲಿ ಮಾಣಿಲ ಶ್ರೀ ಧಾಮದ ಪರಮಪೂಜ್ಯ ಶ್ರೀ ಮೋಹನದಾಸ್ ಸ್ವಾಮೀಜಿ ಉಪಸ್ಥಿತರಿರುವರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕ ಸತೀಶ್ ಶೆಟ್ಟಿ, ಯೋಜನಾಧಿಕಾರಿ ಚೇತನಾ ಎಂ. ಅತಿಥಿಗಳಾಗಿ ಭಾಗವಹಿಸುವರು.