ಮುಂಬೈ: ರಿಲಯನ್ಸ್ ಕಮ್ಯುನಿಕೇಷನ್ಸ್ ಅಧ್ಯಕ್ಷ ಅನಿಲ್ ಧಿರೂಭಾಯಿ ಅಂಬಾನಿ ಅವರು ಕಂಪನಿಯ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ರಿಲಯನ್ಸ್ ಕಮ್ಯುನಿಕೇಷನ್ಸ್ ನೀಡಿರುವ ಪತ್ರಿಕಾ ಪ್ರಕಟಣೆಯ ಪ್ರಕಾರ, ಕಂಪನಿಯ ನಿರ್ದೇಶಕರಾಗಿದ್ದ ಛಾಯಾ ವಿರಾನಿ, ರ್ಯಾ ನಾ ಕರಾನಿ, ಮಂಜರಿ ಕಾಕೆರ್ ಮತ್ತು ಸುರೇಶ್ ರಂಗಾಚಾರ್ ಅವರು ಸಹ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ.ಅಂಬಾನಿ, ಛಾಯಾ ವಿರಾನಿ, ಮಂಜರಿ ಕೇಕರ್ ಅವರು ನವೆಂಬರ್ 15ರಂದು, ???ಯಾನಾ ಕರಾನಿ ಅವರು ನವೆಂಬರ್ 14ರಂದು ಮತ್ತು ಸುರೇಶ್ ರಂಗಾಚಾರ್ ಅವರು ನವೆಂಬರ್ 13ರಂದು ರಾಜೀನಾಮೆ ನೀಡಿದ್ದಾರೆ.
ಕಳೆದ ಅಕ್ಟೋಬರ್ 4ರಂದು ಮಣಿಕಂಠನ್ ವಿ. ಅವರು ಕಂಪನಿಯ ನಿರ್ದೇಶಕ ಹಾಗೂ ಮುಖ್ಯ ಹಣಕಾಸು ಅಧಿಕಾರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.