ನವದೆಹಲಿ: ಸಂಸತ್‍ನ ಸೆಂಟ್ರಲ್ ಹಾಲ್‍ನಲ್ಲಿ ಏರ್ಪಡಿಸಿದ್ದ 70ನೇ ಸಂವಿಧಾನ ದಿನ ಕಾರ್ಯಕ್ರಮವನ್ನು ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಬಹಿಷ್ಕರಿಸಿವೆ.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನೇತೃತ್ವದಲ್ಲಿ ವಿರೋಧ ಪಕ್ಷಗಳ ಸದಸ್ಯರು ಸಂಸತ್ ಆವರಣದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಕಾಂಗ್ರೆಸ್ ಸಂಸದರಾದ ರಾಹುಲ್ ಗಾಂಧಿ, ಆನಂದ್ ಶರ್ಮಾ, ಟಿಎಂಸಿ ಸಂಸದರು ಹಾಗೂ ಇತರ ಪಕ್ಷಗಳ ಸಂಸದರು ಅಂಬೇಡ್ಕರ್ ಪ್ರತಿಮೆ ಬಳಿ ನಿಂತು " ಪ್ರಜಾಪ್ರಭುತ್ವದ ಕಗ್ಗೊಲೆ ನಿಲ್ಲಿಸಿ" ಎಂಬ ಬ್ಯಾನರ್ ಹಿಡಿದು ಪ್ರತಿಭಟನೆ ನಡೆಸಿದರು.