ಕುಂಬಳೆ: ಕುಂಬಳೆಯ ಸೈಂಟ್ ಮೋನಿಕ ಶಾಲೆಯಲ್ಲಿ ಈ ವರ್ಷದ ಶಾಲಾ ಕ್ರೀಡೋತ್ಸವ ಶನಿವಾರ ನಡೆಯಿತು.
ಕ್ರೀಡೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಅತಿಥಿಗಳಾಗಿ ವಕೀಲ ಉದಯ್ ಕುಮಾರ್ ಗಟ್ಟಿ ಉಪಸ್ಥಿತರಿದ್ದು ಶುಭಹಾರೈಸಿದರು. ಶಾಲಾ ಮುಖ್ಯೋಪಾಧ್ಯಾಯ ಅನಿಲ್ ಪ್ರಕಾಶ್ ಡಿಸಿಲ್ವ ಹಾಗೂ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷ ಮಹೇಶ್ ಪುಣಿಯೂರ್ ಉಪಸ್ಥಿತರಿದ್ದರು. ಮಕ್ಕಳು ವಿವಿಧ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿದರು. ವಿಜೇತರಿಗೆ ಬಹುಮಾನ ವಿತರಿಸಲಾಯಿತು.