ಮಂಜೇಶ್ವರ: ಕುಳೂರಿನಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಶಾಲಾ ರಕ್ಷಕ-ಶಿಕ್ಷಕ ಸಂಘ ಹಾಗೂ ಹಳೆ ವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ಆಚರಿಸಲಾಯಿತು.
ಆ ಪ್ರಯುಕ್ತ ನಡೆದ ಸಭಾ ಕಾರ್ಯಕ್ರಮವನ್ನು ಮೀಂಜ ಗ್ರಾಮ ಪಂಚಾಯತಿ ಅಧ್ಯಕ್ಷೆ ಶಂಶಾದ್ ಶುಕೂರ್ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಜಯರಾಜ್ ಶೆಟ್ಟಿ ಚಾರ್ಲ ವಹಿಸಿದ್ದರು. ಇದೇ ಸಂದರ್ಭದಲ್ಲಿ ಶಾಲಾ ಮಕ್ಕಳ `ಕುಳೂರ ಧ್ವನಿ' ರೇಡಿಯೋ ಸ್ಟೇಷನ್‍ಗೆ ಗ್ರಾಮ ಪಂಚಾಯತಿ ಸದಸ್ಯೆ ಚಂದ್ರಾವತಿ ವಿ.ಪಿ. ಚಾಲನೆಯನ್ನಿತ್ತರು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮಂಜೇಶ್ವರ ಉಪಜಿಲ್ಲಾ ಪ್ರಭಾರ ಕ್ಷೇತ್ರ ನಿರೂಪಣಾಧಿಕಾರಿ ಗುರುಪ್ರಸಾದ್ ರೈ ಉಲ್ಲಾಸ ಗಣಿತ ಕಾರ್ಯಕ್ರಮದ ಕಿಟ್‍ನ್ನು ಮಕ್ಕಳಿಗೆ ನೀಡುವ ಮೂಲಕ ಬಿಡುಗಡೆ ಮಾಡಿದರು.
ಕಾರ್ಯಕ್ರಮದಲ್ಲಿ ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೊಹಮ್ಮದ್ ಕಂಚಿಲ, ಶಾಲಾ ಮಾತೃ ಸಂಘದ ಅಧ್ಯಕ್ಷೆ ರಾಜಲಕ್ಷ್ಮಿ ದೇರಂಬಳ ಗುತ್ತು, ಪೂರ್ವ ಪ್ರಾಥಮಿಕ ವಿಭಾಗದ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಸತೀಶ್ ಎಲಿಯಾಣ, ಮಂಜೇಶ್ವರ ಬಿ.ಆರ್.ಸಿ.ಯ ತರಬೇತುದಾರೆ ಮೋಹಿನಿ ಉಪಸ್ಥಿತರಿದ್ದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ 2019-20 ನೇ ಸಾಲಿನ ಮಂಜೇಶ್ವರ ಉಪಜಿಲ್ಲಾ ಮಟ್ಟದ ವಿಜ್ಞಾನೋತ್ಸವ ಹಾಗೂ ಕಲೋತ್ಸವದಲ್ಲಿ ಮಿಂಚಿದ ಶಾಲಾ ವಿದ್ಯಾರ್ಥಿಗಳಿಗೆ ಸ್ಮರಣಿಕೆ ನೀಡಿ ಅಭಿನಂದಿಸಲಾಯಿತು. ಮಕ್ಕಳ ದಿನಾಚರಣೆಯ ಅಂಗವಾಗಿ ನಡೆಸಿದ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಶಾಲಾ ಶಿಕ್ಷಕಿ ಸೌಮ್ಯ ಪಿ. ಪ್ರಾಸ್ತಾವಿಕವಾಗಿ ಮಾತನಾಡಿದರು.
ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಶಶಿಕುಮಾರ್ ಕುಳೂರು ಸ್ವಾಗತಿಸಿ, ಶಿಕ್ಷಕಿ ನಯನ ಎಂ. ವಂದಿಸಿದರು. ಅಧ್ಯಾಪಕ ಜಯಪ್ರಶಾಂತ್ ಪಾಲೆಂಗ್ರಿ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಶಾಲಾ ಮಕ್ಕಳಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು. ಶಾಲಾ ರಕ್ಷಕ-ಶಿಕ್ಷಕ ಸಂಘ ಹಾಗೂ ಹಳೆ ವಿದ್ಯಾರ್ಥಿ ಸಂಘದ ಸದಸ್ಯರು ಉಪಸ್ಥಿತರಿದ್ದು ಸಹಕರಿಸಿದರು.