ನವದೆಹಲಿ: ಐತಿಹಾಸಿಕ ಅಯೋಧ್ಯ ತೀರ್ಪು ಹೊರಬಂದ ಮೇಲೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನವೆಂಬರ್ ೧೭ರಂದು ನಿವೃತ್ತಿಯಾಗುವ ಮುನ್ನ ಇನ್ನೂ ನಾಲ್ಕು ಮಹತ್ವದ ತೀರ್ಪು ನೀಡಲಿದ್ದಾರೆ.
ರಫೆಲ್ ಯುದ್ಧ ವಿಮಾನ ಖರೀದಿಯಲ್ಲಿ ಹಗರಣ ನಡೆದಿದೆ ಎಂದು ಆರೋಪಿಸಿ ಸಲ್ಲಿಸಲಾಗಿದ್ದ ಕೇಸಿಗೆ ಕಳೆದ ವರ್ಷ ಡಿಸೆಂಬರ್ ೧೪ರಂದು ಸುಪ್ರೀಂ ಕೋರ್ಟ್ ಕ್ಲೀನ್ ಚಿಟ್ ನೀಡಿತ್ತು. ಅದನ್ನು ಪುನರ್ ಪರಿಶೀಲಿಸುವಂತೆ ಕೋರಿ ಅರ್ಜಿ ಸಲ್ಲಿಸಲಾಗಿದ್ದು ಅದರ ತೀರ್ಪನ್ನು ಮುಖ್ಯ ನ್ಯಾಯಮೂರ್ತಿಗಳು ನೀಡಬೇಕಿದೆ.
ಚೌಕಿದಾರ್ ಚೋರ್ ಹೈ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ರಫೆಲ್ ಯುದ್ಧ ವಿಮಾನ ಕೇಸಿನಲ್ಲಿ ರಾಹುಲ್ ಗಾಂಧಿ ವಿರುದ್ಧ ಇರುವ ನ್ಯಾಯಾಂಗ ನಿಂದನೆ ಅರ್ಜಿ ತೀರ್ಪು, ಕೇರಳದ ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ಕುರಿತ ಪುನರ್ ಪರಿಶೀಲನಾ ಅರ್ಜಿ ತೀರ್ಪು ಮತ್ತು ಮುಖ್ಯ ನ್ಯಾಯಮೂರ್ತಿಗಳ ಕಚೇರಿ ಮಾಹಿತಿ ಹಕ್ಕು ಕಾಯ್ದೆಯಡಿ ಬರುವ ಕುರಿತ ಕೇಸಿನ ಬಗ್ಗೆ ತೀರ್ಪು ಕೊಡಬೇಕಿದೆ.