ಬ್ರೆಸಿಲಿಯಾ: ಮುಂದಿನ ವರ್ಷ ಜನವರಿ 26 ರಂದು ನವದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸದ ಮುಖ್ಯ ಅತಿಥಿಯಾಗುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಬ್ರೆಜಿಲ್ ಅಧ್ಯಕ್ಷ ಜೈರ್ ಮೆಸ್ಸಿಯಾಸ್ ಬೋಲ್ಸನಾರೊ ಅವರನ್ನು ಔಪಚಾರಿಕವಾಗಿ ಆಹ್ವಾನಿಸಿದ್ದಾರೆ.
ಬುಧವಾರ ತಡರಾತ್ರಿ ಬ್ರೆಸಿಲಿಯಾದಲ್ಲಿ ಜರುಗಿದ ದ್ವಿಪಕ್ಷೀಯ ಮಾತುಕತೆಯಲ್ಲಿ ಮೋದಿ ಅವರು ಬೋಲ್ಸನಾರೊಗೆ ಆಹ್ವಾನ ನೀಡಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಬ್ರೆಜಿಲ್ ಅಧ್ಯಕ್ಷರು ಮೋದಿಯವರ ಆಹ್ವಾನವನ್ನುಒಪ್ಪಿದ್ದಾರೆ. ಬೋಲ್ಸೊನಾರೊ ಆಯೋಜಿಸಿರುವ 11ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಮೋದಿ ಬ್ರೆಸಿಲಿಯಾ ಪ್ರವಾಸದಲ್ಲಿದ್ದಾರೆ.
ಭಾರತದ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಬ್ರೆಜಿಲ್ ಅಧ್ಯಕ್ಷರ ನವದೆಹಲಿ ಭೇಟಿ ಉಭಯ ರಾಷ್ಟ್ರಗಳ ನಡುವಿನ ಕಾರ್ಯತಂತ್ರದ ಸಹಭಾಗಿತ್ವವನ್ನು ಮತ್ತಷ್ಟು ಹೆಚ್ಚಿಸಲಿದೆ ಎಂಬ ವಿಶ್ವಾಸವನ್ನು ಉಭಯ ನಾಯಕರು ವ್ಯಕ್ತಪಡಿಸಿದ್ದಾರೆ.