ಸಮರಸ ಚಿತ್ರ ಸುದ್ದಿ: ಬದಿಯಡ್ಕ: ಸರ್ಕಾರಿ ವೊಕೇಷನಲ್ ಹೈಯರ್ ಸೆಕೆಂಡರಿ ಶಾಲೆ ಇರಿಯಣ್ಣಿಯಲ್ಲಿ ನಡೆದ ಕಾಸರಗೋಡು ಜಿಲ್ಲಾ ಮಟ್ಟದ ಕಲೋತ್ಸವದಲ್ಲಿ ಹೈಸ್ಕೂಲು ವಿಭಾಗದ ಸಂಸ್ಕೃತ ಉಪನ್ಯಾಸ ರಚನೆಯಲ್ಲಿ ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲೆಯ 10ನೇ ತರಗತಿಯ ಅದಿತಿ ಕೆ. ಎಶ್ರೇಣಿಯೊಂದಿಗೆ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಈಕೆ ಕುಂಜಾರು ಕೆ. ಗೋಪಾಲಕೃಷ್ಣ ಭಟ್ ಮತ್ತು ವಿಜಯಶ್ರೀ ಕೆ. ದಂಪತಿಗಳ ಪುತ್ರಿ.