ನವದೆಹಲಿ: ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕೆ ೫ ಎಕರೆ ಭೂಮಿ ನೀಡಬೇಕು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಅಖಿಲ ಭಾರತೀಯ ಹಿಂದೂ ಮಹಾಸಭಾ ಮರು ಪರಿಶೀಲನಾ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ.
ಅಯೋಧ್ಯೆಯ ಪ್ರಮುಖ ಸ್ಥಳದಲ್ಲೇ ಮಸೀದಿ ನಿರ್ಮಾಣಕ್ಕೆ ೫ ಎಕರೆ ಭೂಮಿಯನ್ನು ಬಾಬರಿ ಮಸೀದಿ ಪರ ಹೋರಾಡುತ್ತಿದ್ದ ಸುನ್ನಿ ವಕ್ಫ್ ಬೋರ್ಡ್ ಗೆ ನೀಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು ಈ ನಿರ್ದೇಶನದ ಬಗ್ಗೆ ಹಿಂದೂ ಮಹಾಸಭಾ ಆಕ್ಷೇಪ ವ್ಯಕ್ತಪಡಿಸಿದೆ. ಈ ಸಂಬAಧ ಪರಿಶೀಲನಾ ಅರ್ಜಿ ಸಲ್ಲಿಸಲು ಅಧ್ಯಯನ ಮಾಡುತ್ತಿದ್ದೇವೆ ಎಂದು ಹಿಂದೂ ಮಹಾಸಭಾ ಹೇಳಿದೆ. ಅಯೋಧ್ಯೆಯಲ್ಲಿ ದೇವಾಲಯ ಇತ್ತು ಎಂದು ಸಾಬೀತಾದರೆ ಸುನ್ನಿ ವಕ್ಫ್ ಬೋರ್ಡ್ ಗೆ ಯಾಕೆ ಭೂಮಿಯನ್ನು ನೀಡಬೇಕು. ಹೀಗಾಗಿ ಪ್ರಸ್ತುತ ನಾವು ಸುಪ್ರೀಂ ಕೋರ್ಟ್ ತೀರ್ಪನ್ನು ಅಧ್ಯಯನ ಮಾಡುತ್ತಿದ್ದೇವೆ. ನಂತರ ಪರಿಶೀಲನಾ ಅರ್ಜಿಯನ್ನು ಸಲ್ಲಿಸುವ ಬಗ್ಗೆ ನಿರ್ಧರಿಸುತ್ತೇವೆ ಎಂದು ಅಖಿಲ ಭಾರತೀಯ ಹಿಂದೂ ಮಹಾಸಭಾ ಅಧ್ಯಕ್ಷ ಶಿಶಿರ್ ಚತುರ್ವೇದಿ ಹೇಳಿದ್ದಾರೆ.
ಸುಪ್ರೀಂ ಕೋರ್ಟ್ ವಿವಾದಿತ ಭೂಮಿಯನ್ನು ರಾಮಲಲ್ಲಾಗೆ ನೀಡಿತ್ತು. ಇನ್ನು ಬಾಬರಿ ಮಸೀದಿ ಧ್ವಂಸ ಮಾಡಿ ಮತ್ತೊಂದು ಧರ್ಮದ ಆಚರಣೆಗೆ ಧಕ್ಕೆ ಮಾಡಲಾಗಿದೆ. ಹೀಗಾಗಿ ಅವರಿಗೆ ಅಯೋಧ್ಯೆಯಲ್ಲೇ ೫ ಎಕರೆ ಭೂಮಿಯನ್ನು ನೀಡಲು ಆದೇಶಿಸಿತ್ತು.