ನವದೆಹಲಿ: ಶತಮಾನಗಳಿಂದ ತೀವ್ರ ಕುತೂಹಲ ಹಾಗೂ ವಿವಾದದಿಂದ ಕೂಡಿದ್ದ ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ-ಬಾಬರಿ ಮಸೀದಿ ತೀರ್ಪು ಪ್ರಕಟಗೊಂಡಿದೆ. ಇಡೀ ಭಾರತ ಎದುರು ನೋಡುತ್ತಿದ್ದ ಅಯೋಧ್ಯೆ ವಿವಾದಕ್ಕೆ ಅಂತ್ಯ ಹಾಡಿರುವ ಸುಪ್ರೀಂಕೋರ್ಟ್, ಐತಿಹಾಸಿಕ ತೀರ್ಪು ನೀಡಿದೆ. ವಿವಾದಿತ ಪ್ರದೇಶದಲ್ಲಿ ಮಂದಿನ ನಿರ್ಮಾಣಕ್ಕೆ ಉಚ್ಛ ನ್ಯಾಯಾಲಯ ಗ್ರೀನ್ ಸಿಗ್ನಲ್ ನೀಡಿದೆ.
ತೀರ್ಪಿನ ಪ್ರತಿಗೆ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಐವರು ನ್ಯಾಯಾಧೀಶರನ್ನೊಳಗೊಂಡ ಪೀಠ, ಶಿಯಾ ವಕ್ಫ್ ಮಂಡಳಿಯ ವಿಶೇಷ ರಜಾ ಅರ್ಜಿಯನ್ನು ವಜಾಗೊಳಿಸಿದೆ. ೧೯೪೬ರಲ್ಲಿ ಉತ್ತರ ಪ್ರದೇಶದ ಫೈಜಾಬಾದ್ ಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ವಕ್ಫ್ ಬೋರ್ಡ್ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು.