ನವದೆಹಲಿ: ಅಯೋಧ್ಯೆ ಭೂ ವಿವಾದ ವಿಷಯದಲ್ಲಿ ತಾವು ,ಮರುಪರಿಶೀಲನಾ ಅರ್ಜಿ ಸಲ್ಲಿಸುವುದಿಲ್ಲ ಎಂದು ಸುನ್ನಿ ವಕ್ಫ್ ಮಂಡಳಿಯ ವಕೀಲ ಝಫರ್ಯಾದ್ ಜಿಲಾನಿ ಹೇಳಿದ್ದಾರೆ.
ಅಯೋಧ್ಯೆಯಲ್ಲಿನ ವಿವಾದಿತ ಭೂಮಿಯನ್ನು ರಾಮಮಂದಿರಕ್ಕೆ ಮತ್ತು ಐದು ಎಕರೆ ಪರ್ಯಾಯ ಭೂಮಿಯನ್ನು ಮುಸ್ಲಿಂ ದಾವೆದಾರರಿಗೆ ಮಸೀದಿ ನಿರ್ಮಾಣಕ್ಕಾಗಿ ನಿಡಲು ಸುಪ್ರೀಂ ಕೋರ್ಟ್ ತೀರ್ಪುನೀಡಿದ ನಂತರ ಜಿಲಾನಿ ಹೇಳಿದ್ದಾರೆ. ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಸುಪ್ರೀಂ ಕೋರ್ಟ್ ನ್ಯಾಯಪೀಠವು ೩-೪ ತಿಂಗಳೊಳಗೆ ಕೇಂದ್ರ ಸರ್ಕಾರವು ರಾಮಮಂದಿರ ನಿರ್ಮಾಣಕ್ಕಾಗಿ ಸಮಿತಿ ರಚನೆ ಮಾಡಬೇಕು. ಅಲ್ಲದೆ ಅದೇ ಅವಧಿಯಲ್ಲಿ ಅಯೋಧ್ಯೆಯ ಪ್ರಮುಖ ಸ್ಥಳದಲ್ಲಿ ಪರ್ಯಾಯವಾಗಿ ಐದು ಎಕರೆ ಭೂಮಿಯನ್ನು ಮಸೀದಿ ನಿರ್ಮಾಣಕ್ಕೆ ಮಂಜೂರು ಮಾಡಬೇಕು ಎಂದು ನ್ಯಾಯಾಲಯ ಹೇಳಿದೆ.