ಮುಂಬೈ: ಮಹಾರಾಷ್ಟ್ರದಲ್ಲಿ 3 ದಿನಗಳ ಬಿಜೆಪಿ ಸರ್ಕಾರ ಬಹುಮತವಿಲ್ಲದೇ ಪತನಗೊಂಡಿದ್ದು, ದೇವೇಂದ್ರ ಫಡ್ನವಿಸ್ ರಾಜೀನಾಮೆ ನೀಡಿದ್ದಾರೆ. ಈ ಬೆನ್ನಲ್ಲೇ ಎನ್ ಸಿಪಿ-ಕಾಂಗ್ರೆಸ್ -ಶಿವಸೇನೆ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾಗಿ ಡಿ.1 ರಂದು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಉದ್ಧವ್ ಠಾಕ್ರೆ ಪದಗ್ರಹಣಕ್ಕೆ ಸಿದ್ಧತೆಗಳು ನಡೆಯುತ್ತಿದ್ದು, ಪದಗ್ರಹಣ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿಗೆ ಆಹ್ವಾನ ನೀಡುತ್ತೀರಾ?ಎಂಬ ಪ್ರಶ್ನೆಗೆ ಎಲ್ಲರಿಗೂ ಆಹ್ವಾನ ನೀಡುತ್ತೇವೆ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರಿಗೂ ಆಹ್ವಾನ ನೀಡುತ್ತೇವೆ ಎಂದು ಶಿವಸೇನೆ ನಾಯಕ ಸಂಜಯ್ ರಾವತ್ ಹೇಳಿದ್ದಾರೆ.