HEALTH TIPS

ಡಿ. ೨ ರಂದು ಕುಮಾರಮಂಗಲ ಷಷ್ಠೀ ಮಹೋತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ

           
        ಬದಿಯಡ್ಕ: ಬೇಳ ಕುಮಾರಮಂಗಲ ಶ್ರೀ ಸುಬ್ರಹ್ಮಣ್ಯ ಸ್ವಾಮೀ ಕ್ಷೇತ್ರದಲ್ಲಿ ವರ್ಷಂಪ್ರತಿ ವಿಜೃಂಭಣೆಯಿAದ ನಡೆದುಬರುತ್ತಿರುವ ಷಷ್ಠೀ ಮಹೋತ್ಸವವು ಡಿಸೆಂಬರ್ ೨ರಂದು ಸೋಮವಾರ ನಡೆಯಲಿರುವುದು. ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ತಂತ್ರಿವರ್ಯ ಬ್ರಹ್ಮಶ್ರೀ ಉಳಿಯ ವಿಷ್ಣು ಆಸ್ರ ಭಾನುವಾರ ಅಪರಾಹ್ನ ಶ್ರೀ ಕ್ಷೇತ್ರದಲ್ಲಿ ಜರಗಿದ ಕುಮಾರಮಂಗಲ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಸೇವಾ ಸಮಿತಿಯ ಮಹಾಸಭೆಯಲ್ಲಿ ಬಿಡುಗಡೆಗೊಳಿಸಿ ಅವರು ಮಾತನಾಡಿ ಶ್ರೀದೇವರ ಕಾರ್ಯದಲ್ಲಿ ಎಲ್ಲರೂ ಕೈಜೋಡಿಸುವಂತೆ ತಿಳಿಸಿದರು.
       ಷಷ್ಠೀ ಮಹೋತ್ಸವದ ಸಂದರ್ಭದಲ್ಲಿ ವಿವಿಧ ದೇವತಾ ಕಾರ್ಯಗಳು, ಸಂಗೀತ, ಯಕ್ಷಗಾನ ತಾಳಮದ್ದಳೆ, ಯಕ್ಷಗಾನ ಬಯಲಾಟ ಮೊದಲಾದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿರುವುದು. ಪ್ರಧಾನ ಅರ್ಚಕ ರಾಮಚಂದ್ರ ಅಡಿಗ, ವಸಂತ ಪೈ ಬದಿಯಡ್ಕ, ಸಮಿತಿಯ ಪದಾಧಿಕಾರಿಗಳು, ಕಾರ್ಯಕ್ರಮಕ್ಕೆ ಸಹಕರಿಸುವ ವಿವಿಧ ಸಂಘಸAಸ್ಥೆಗಳ ಪದಾಧಿಕಾರಿಗಳು ಹಾಗೂ ಸದಸ್ಯರು, ಊರ ಪರವೂರ ಭಕ್ತರು ಸಭೆಯಲ್ಲಿ ಪಾಲ್ಗೊಂಡಿದ್ದರು. ಕಾರ್ಯದರ್ಶಿ ಶ್ರೀಧರ ಪ್ರಸಾದ ಬೇಳ ಸ್ವಾಗತಿಸಿ, ಗಣರಾಜ ಭಟ್ ನಿಡುಗಳ ವಂದಿಸಿದರು. ೨೦೧೯ ದಶಂಬರ ೧೭ರಿಂದ ೨೦೨೦ ಜನವರಿ ೧೪ರ ತನಕ ಧನುಪೂಜೆಯು ಶ್ರೀ ಕ್ಷೇತ್ರದಲ್ಲಿ ಜರಗಲಿರುವುದು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries