ಬದಿಯಡ್ಕ: ಯಾವುದೇ ಜೀವಿಯ ದೇಹದ ಪ್ರತಿಯೊಂದು ಅವಯವಕ್ಕೂ ಅದರದ್ದೇ ಆದ ವಿಶೇಷತೆ ಹಾಗೂ ಪ್ರಾಮುಖ್ಯತೆಯಿದೆ. ಅದೇ ರೀತಿ ಹಲ್ಲು ಸರಿಯಾಗಿದ್ದರೆ ಮಾತ್ರ ಮನುಷ್ಯನಿಗೂ ನೆಮ್ಮದಿಯಿರುತ್ತದೆ. ಹಲ್ಲಿನ ಆರೋಗ್ಯದ ಕುರಿತು ನಾವು ಹೆಚ್ಚಿನ ಮುತುವರ್ಜಿ ವಹಿಸಿ ಅದರ ರಕ್ಷಣೆಯನ್ನು ಮಾಡಿದರೆ ನಮ್ಮ ಆರೋಗ್ಯವೂ ಉತ್ತಮವಾಗಿರಬಲ್ಲುದು ಎಂದು ಬದಿಯಡ್ಕ ಗ್ರಾಮಪಂಚಾಯಿತಿ ಅಧ್ಯಕ್ಷ ಕೆ.ಎನ್.ಕೃಷ್ಣ ಭಟ್ ಹೇಳಿದರು.
ಬದಿಯಡ್ಕ ಸಮುದಾಯ ಆರೋಗ್ಯ ಕೇಂದ್ರದ ಆಶ್ರಯದಲ್ಲಿ ನೀರ್ಚಾಲು ಮಹಾಜನ ಸಂಸ್ಕöÈತ ಕಾಲೇಜು ಹೈಯರ್ ಸೆಕೆಂಡರಿ ಶಾಲೆಯಲ್ಲಿ ಮಂಗಳವಾರ ನಡೆದ ದಂತ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಬದಿಯಡ್ಕ ಗ್ರಾಮ ಪಂಚಾಯಿತಿ ಗ್ರಾ.ಪಂ. ಸದಸ್ಯ ಶಂಕರ ಡಿ. ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಬದಿಯಡ್ಕ ಸಮುದಾಯ ಆರೋಗ್ಯ ಕೇಂದ್ರ ಪ್ರಧಾನ ವೈದ್ಯಾಧಿಕಾರಿ ಸತ್ಯಶಂಕರ ಭಟ್, ದಂತವೈದ್ಯ ಡಾ.ಸಜೇಶ್, ಆರೋಗ್ಯ ಇಲಾಖೆಯ ಅಧಿಕಾರಿಗಳಾದ ವಿನೋದನ್ ಕೆ., ದೇವಿದಾಕ್ಷನ್, ಹೈಸ್ಕೂಲು ವಿಭಾಗದ ಮುಖ್ಯೋಪಾಧ್ಯಾಯ ವೆಂಕಟರಾಜ ಸಿ.ಯಚ್., ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಚಂದ್ರಶೇಖರ ರೈ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಒಂದರಿAದ ಹತ್ತನೇ ತರಗತಿಯ ವರೆಗಿನ ಆಯ್ಕೆ ಮಾಡಿದ ವಿದ್ಯಾರ್ಥಿಗಳ ದಂತ ತಪಾಸಣೆ ನಡೆಸಲಾಯಿತು. ಶಿಬಿರದ ಯಶಸ್ವಿಗೆ ಆರೋಗ್ಯ ಮತ್ತು ಆಶಾ ಕಾರ್ಯಕರ್ತೆಯರು ಸಹಕರಿಸಿದರು.