ನವದೆಹಲಿ: ವಿವಾದಿತ ರಾಮಜನ್ಮಭೂಮಿ-ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಕುರಿತು ೨೦೧೦ರಲ್ಲಿ ಅಲಹಾಬಾದ್ ಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಮೇಲ್ಮನವಿ ಕುರಿತು ಸುಪ್ರೀಂ ಕೋರ್ಟ್ ಶನಿವಾರ ಐತಿಹಾಸಿಕ ತೀರ್ಪು ನೀಡಿದೆ.ನ್ಯಾಯಾಲಯದಲ್ಲಿ ಇಷ್ಟು ವರ್ಷಗಳ ಕಾಲ ನಡೆದ ಹೋರಾಟದ ಸುದೀರ್ಘ ವಿವರ ಇಲ್ಲಿದೆ:
೧೫೨೮: ಮೊಘಲ್ ಸಾಮ್ರಾಟ್ ಬಾಬರನ ಕಮಾಂಡರ್ ಮಿರ್ ಬಕಿಯಿಂದ ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿ ನಿರ್ಮಾಣ.
೧೮೮೫; ಮಹಂತ್ ರಘುವೀರ್ ದಾಸ್ ಫೈಜಾಬಾದ್ ಜಿಲ್ಲಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ ಮಸೀದಿಯ ಪಕ್ಕದಲ್ಲಿ ಗೋಪುರ ನಿರ್ಮಾಣಕ್ಕೆ ಮನವಿ, ಅರ್ಜಿ ತಿರಸ್ಕೃತ.
೧೮೫೯- ವಿವಾದಿತ ಸ್ಥಳವನ್ನು ಹಿಂದೂ-ಮುಸ್ಲಿAಮರಿಗೆ ಹಂಚಿಕೆ ಮಾಡಿ ಪ್ರಾರ್ಥನೆ ಹಾಗೂ ದೇವಾರಾಧನೆಗೆ ಅವಕಾಶ ಮಾಡಿಕೊಟ್ಟ ಬ್ರಿಟಿಶ್ ಸರ್ಕಾರ
೧೯೪೯ - ವಿವಾದಿತ ಸ್ಥಳದಲ್ಲಿ ಮಸೀದಿಯ ಕೇಂದ್ರ ಗುಮ್ಮಟದೊಳಗೆ ರಾಮಲಲ್ಲಾನ ವಿಗ್ರಹಗಳ ಪ್ರತಿಷ್ಠಾಪನೆ.
೧೯೫೦: ಗೋಪಾಲ್ ಸಿಮ್ಲಾ ವಿಶಾರದ್ ಮತ್ತು ಪರಮಹಂಸ ರಾಮಚಂದ್ರ ದಾಸ್ ಫೈಜಾಬಾದ್ ಕೋರ್ಟ್ ನಲ್ಲಿ ಎರಡು ದಾವೆ ಸಲ್ಲಿಸಿ ಮಸೀದಿಯಲ್ಲಿ ಮೂರ್ತಿ ಆರಾಧನೆಗೆ ಅನುಮತಿ ಕೋರಿ ಮನವಿ ಸಲ್ಲಿಕೆ,
೧೯೫೯ - ವಿವಾದಿತ ಜಾಗದ ಸ್ವಾಧೀನ ಕೋರಿ ನಿರ್ಮೋಹಿ ಅಖಾಡದಿಂದ ಅರ್ಜಿ ಸಲ್ಲಿಕೆ
೧೯೬೧- ವಿವಾದಿತ ಸ್ಥಳ ನಮ್ಮದು ಎಂದು ನ್ಯಾಯಾಲಯದ ಮೊರೆ ಹೋದ ಸುನ್ನಿ ವಕ್ಫ್ ಮಂಡಳಿ
೧೯೮೧: ಉತ್ತರ ಪ್ರದೇಶದ ಸುನ್ನಿ ಕೇಂದ್ರ ವಕ್ಫ್ ಬೋರ್ಡ್ ಸ್ಥಳದ ಸ್ವಾಧೀನ ಕೋರಿ ಅರ್ಜಿ, ಮಸೀದಿಯಿಂದ ಮೂರ್ತಿ ತೆಗೆಯುವಂತೆ ಕೋರಿ ಮನವಿ.
೧೯೮೬ - ವಿವಾದಗ್ರಸ್ತ ಜಾಗದಲ್ಲಿ ಹಿಂದೂಗಳ ಪೂಜೆಗೆ ಅನುವು ಮಾಡಿಕೊಡುವಂತೆ ಸ್ಥಳೀಯ ನ್ಯಾಯಾಲಯ ಆದೇಶ.
೧೯೮೯: ವಿವಾದಗ್ರಸ್ತ ಜಾಗದ ವಿಷಯದಲ್ಲಿ ಯಥಾಸ್ಥಿತಿ ಕಾಯ್ದುಕೊಂಡು ಹೋಗುವಂತೆ ಅಲಹಾಬಾದ್ ಹೈಕೋರ್ಟ್ ಆದೇಶ.
೧೯೯೦- ವಿವಾದಿತ ಪ್ರದೇಶದಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಲಾಲ್ ಕೃಷ್ಣ ಅದ್ವಾಣಿ ನೇತೃತ್ವದಲ್ಲಿ ಬಿಜೆಪಿಯಿಂದ ರಥಯಾತ್ರೆ
೧೯೯೨, ಡಿ.೬: ಬಾಬ್ರಿ ಮಸೀದಿ ಧ್ವಂಸ.
೧೯೯೩: ವಿವಾದಿತ ಜಾಗವನ್ನು ಕೇಂದ್ರ ಸ್ವಾಧೀನಪಡಿಸಿಕೊಳ್ಳುವುದಕ್ಕಾಗಿ 'ಅಯೋಧ್ಯೆ ನಿರ್ದಿಷ್ಟ ಪ್ರದೇಶದ ಸ್ವಾಧೀನ ಕಾಯಿದೆ' ಅಂಗೀಕಾರ. ಇದಕ್ಕೆ ಇಸ್ಮಾಯಿಲ್ ಫಾರೂಕಿ ಸೇರಿದಂತೆ ಹಲವರಿಂದ ತಕರಾರು ಅರ್ಜಿ.
೨೦೦೨: ಜಾಗದ ಒಡೆತನ ಯಾರಿಗೆ ಸೇರಿದ್ದು ಎನ್ನುವ ವ್ಯಾಜ್ಯ ಕುರಿತು ಅಲಹಾಬಾದ್ ಹೈಕೋರ್ಟ್ ವಿಚಾರಣೆ ಆರಂಭ.
೨೦೧೦: ಸುನ್ನಿ ವಕ್ಫ್ ಮಂಡಳಿ, ನಿರ್ಮೋಹಿ ಅಖಾಡ ಮತ್ತು ರಾಮ್‌ಲಲ್ಲಾ ಮೂರೂ ವಾರಸುದಾರರಿಗೆ ವಿವಾದಿತ ಜಾಗದ ಸಮಾನ ಹಂಚಿಕೆ ಮಾಡಿ ತೀರ್ಪು.
೨೦೧೧: ಅಯೋಧ್ಯೆ ಭೂ ವಿವಾದ ಕುರಿತ ಹೈಕೋರ್ಟ್ ತೀರ್ಪಿಗೆ ಸುಪ್ರಿ?ಂ ತಡೆ.
೨೦೧೭: ಪರಸ್ಪರ ಸಂಧಾನ ಸಮ್ಮತಿ ಮೂಲಕ ವ್ಯಾಜ್ಯ ಇತ್ಯರ್ಥ ಪಡಿಸಿಕೊಳ್ಳಲು ಸಿಜೆಐ ಜೆ.ಎಸ್. ಖೇಹರ್ ಸಲಹೆ.
೨೦೧೭: ಅಲಹಾಬಾದ್ ಹೈಕೋರ್ಟ್ನ ೧೯೯೪ರ ತೀರ್ಪಿನ ವಿರುದ್ಧ ಸಲ್ಲಿಕೆಯಾದ ಅರ್ಜಿಗಳ ವಿಚಾರಣೆಗೆ ಸುಪ್ರಿ?ಂ ತ್ರಿಸದಸ್ಯ ಪೀಠ ರಚನೆ.
೨೦೧೮: ತನ್ನ ೧೯೯೪ರ ತೀರ್ಪಿನ ಮರು ಪರಿಶೀಲನೆ ಕೋರಿದ ಅರ್ಜಿಗಳ ವಿಚಾರಣೆಯನ್ನು ೫ ಸದಸ್ಯರ ವಿಸ್ತೃತ ಪೀಠಕ್ಕೆ ಒಪ್ಪಿಸಲು ಕೋರಿ ರಾಜೀವ್ ಧವನ್ ಅವರಿಂದ ಅರ್ಜಿ.
೨೦೧೯: ನಿವೃತ್ತ ನ್ಯಾಯಮೂರ್ತಿ ಖಲೀಫುಲ್ಲಾ ನೇತೃತ್ವದ ಸಂಧಾನ ಸಮಿತಿಯ ಯತ್ನ ವಿಫಲ. ಈ ಹಿನ್ನಲೆಯಲ್ಲಿ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠದಿಂದ ನಲವತ್ತು ದಿನಗಳ ಕಾಲ ವಿಚಾರಣೆ
೨೦೧೯: ನವೆಂಬರ್ ೯ - ಅಯೋಧ್ಯೆ ಅಂತಿಮ ತೀರ್ಪು ಪ್ರಕಟ, ವಿವಾದಿತ ಭೂಮಿ ರಾಮಲಲ್ಲಾ ಪಾಲು, ರಾಮ ಮಂದಿರ ನಿರ್ಮಾಣಕ್ಕೆ ಅನುಮತಿ.