ಕಾಸರಗೋಡು: ಮಂಜೇಶ್ವರ, ಕಾಸರಗೋಡು ಹಾಗೂ ಹೊಸದುರ್ಗ ತಾಲೂಕುಗಳ ವಿವಿಧ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಗಣಿತ, ಸಮಾಜ ವಿಜ್ಞಾನ ಮುಂತಾದ ವಿಷಯಗಳಿಗೆ ಬೋಧನೆ ಮಾಡಲು ಕನ್ನಡ ಅರಿಯದ ಮಲಯಾಳಿ ಅಧ್ಯಾಪಕರ ನೇಮಕಾತಿ ವಿರುದ್ಧ ಕನ್ನಡ ಹೋರಾಟ ಸಮಿತಿ ನೇತೃತ್ವದಲ್ಲಿ ಕನ್ನಡ ಮಕ್ಕಳ ಪೋಷಕರು, ರಕ್ಷಕ-ಶಿಕ್ಷಕ ಸಂಘ ಹಾಗೂ ವಿವಿಧ ಕನ್ನಡ ಪರ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ನಡೆಸಿದ ಹೋರಾಟದ ಫಲವಾಗಿ ತಾತ್ಕಾಲಿಕ ಪರಿಹಾರ ಲಭಿಸಿದೆ.
ಪ್ರಸ್ತುತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಶಾಲಾ ಕನ್ನಡ ಅಧ್ಯಾಪಕರ, ಪೋಷಕರ ಕನ್ನಡ ಭಾಷಾಭಿಮಾನಿಗಳ ಸಭೆ ನ.೯ರಂದು ಬೆಳಗ್ಗೆ ೧೦ ಗಂಟೆಗೆ ಬೀರಂತಬೈಲಿನ ಕನ್ನಡ ಅಧ್ಯಾಪಕ ಭವನದಲ್ಲಿ ನಡೆಯಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಿಗರು ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ಕನ್ನಡ ಹೋರಾಟ ಸಮಿತಿ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.